Advertisement

ಸಿದ್ದು-ಡಿಕೆಶಿಗೆ ಎಚ್‌ಡಿಡಿ, ಎಚ್‌ಡಿಕೆ ಅಭಿನಂದನೆ

09:51 PM May 20, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಟ್ವೀಟ್‌ ಮೂಲಕ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆಗಳು. ಇಬ್ಬರೂ ಜತೆಗೂಡಿ ರಾಜ್ಯದ ಜನತೆಯ ಒಳಿತಿಗೆ ಕೆಲಸ ಮಾಡಲಿ ಎಂದು ಹಾರೈಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌ ಸರ್ಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಮತ್ತು ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಹೇಳಿದ್ದಾರೆ.

ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್‌ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್‌ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next