Advertisement
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೊರಡಿಸಿರುವ ಪ್ಯಾಕೇಜ್ ಗೆ ಈಗ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೂಡ ಪ್ಯಾಕೇಜ್ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
Related Articles
ಮಾತ್ರವಲ್ಲದೇ, ವಾಲಕ ವರ್ಗದವರಿಗೆ ನೀಡಿದ ಪ್ಯಾಕೇಜ್ ಬಗ್ಗೆ ಪ್ರತಿಕ್ರಿಯಿಸಿದ ಅವರು, 2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್ ಟಿ ಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
Advertisement
ಇನ್ನು, ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ ಎಂದು ಕಿಡಿ ಕಾರಿದ್ದಾರೆ.
ಕೋವಿಡ್ 19 ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ರಾಜ್ಯಸರ್ಕಾರ ಇಂದು(ಬುಧವಾರ, ಮೇ 19) 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ಇದನ್ನೂ ಓದಿ : ನೆಪಮಾತ್ರದ ಪ್ಯಾಕೇಜ್, ಬಡವರಿಗೆ ನೆರವಾಗುವ ಉದ್ದೇಶವಿಲ್ಲ; ಡಿ.ಕೆ. ಶಿವಕುಮಾರ್ ಆಕ್ರೋಶ