Advertisement

ಜನತಾ ಜಲಧಾರೆ : ನಗರದ ಕೆರೆ ನುಂಗಿದವರನ್ನು ಖಾಲಿ ಮಾಡಿಸುತ್ತೇನೆ : ಎಚ್‌ಡಿಕೆ ವಾಗ್ದಾಳಿ

11:00 PM May 10, 2022 | Team Udayavani |

ಬೆಂಗಳೂರು: ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕೆರೆ-ಕೋಡಿಗಳನ್ನು ನುಂಗಿದವರನ್ನು ಖಾಲಿ ಮಾಡಿಸಿ ಆ ಕೆರೆಗಳಿಗೆ ಗತವೈಭವ ತಂದು ನದಿ ನೀರನ್ನು ತುಂಬಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

ನಗರದ ಮಹಾಲಕ್ಷ್ಮೀಲೇಔಟ್‌ನಲ್ಲಿ ಮಂಗಳವಾರ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತುಕೊಟ್ಟು, ಜಲಮೂಲಗಳನ್ನು ರಕ್ಷಣೆ ಮಾಡುತ್ತೇವೆ. ಕೆರೆ -ಕೋಡಿಗಳನ್ನು ನುಂಗಿದವರನ್ನು ಖಾಲಿ ಮಾಡಿಸುತ್ತೇನೆ. ಯಾರ ಮನೆ ಬಾಗಲಿಗೂ ನನ್ನನ್ನೂ ಕಳಿಸಬೇಡಿ, ನನ್ನ ಮನೆ ಬಾಗಿಲಿಗೂ ಯಾರು ಬರುವುದಕ್ಕೆ ಬಿಡಬೇಡಿ. ಸ್ವತಂತ್ರ ಸರ್ಕಾರ ನೀಡಿ. ಇದು ನನ್ನ ಕೊನೆ ಹೋರಾಟ, ಒಂದೇಒಂದು ಅವಕಾಶ ಕೊಡಿ ಎಂದು ಅವರು ಮನವಿ ಮಾಡಿದರು.

ನಾನು 25 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡದೇ ಇದ್ದಿದ್ದರೆ ಎಂಟು ಸಾವಿರ ಕೋಟಿ ರೂ. ಕಮಿಷನ್‌ ಸಿಗುತ್ತಿತ್ತು. ನಾನು ಬೆಂಗಳೂರಿನಲ್ಲಿ ಚರಂಡಿ ಕ್ಲೀನ್‌ ಮಾಡುವುದಕ್ಕೆ, ವೈಟ್‌ ಟ್ಯಾಪಿಂಗ್‌ ಮಾಡುವುದಕ್ಕೆ ಅದೇ ಹಣವನ್ನು ಕೊಟ್ಟು ಕಮಿಷನ್‌ ಪಡೆದಿದ್ದರೆ ಬಿಜೆಪಿ, ಕಾಂಗ್ರೆಸ್‌ಗಿಂತ ಚೆನ್ನಾಗಿ ಚುನಾವಣೆ ಮಾಡಬಹುದಿತ್ತು. ನಮ್ಮ ಶಾಸಕರಿಗೆ ಆ ಹಣವನ್ನು ಹಂಚಿ ಕೊಳ್ಳೆ ಹೊಡೆಯಬಹುದಿತ್ತು. ಈಗ ಬಿಜೆಪಿಯವರು 40% ಕಮಿಷನ್‌ ಹೊಡೆಯುತ್ತಿದ್ದಾರೆ, ಅವರಿಗೆ ನಾಚಿಕೆ ಆಗಬೇಕು ಎಂದು ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.
ರಾಜ್ಯದ ನೀರಾವರಿ ಯೋಜನೆಗಳನ್ನು ಬದ್ಧತೆಯಿಂದ ಜಾರಿ ಮಾಡುವುದು ನಮ್ಮ ಗುರಿ. ನೆನೆಗುದಿಗೆ ಬಿದ್ದಿರುವ ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇವೆ. ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಮೆಟ್ರೋ ರೈಲು, ಐಟಿಗೆ ಉತ್ತೇಜನ, 9 ಟಿಎಂಸಿ ಕುಡಿಯುವ ನೀರು ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟರು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದನ್ನೂ ಓದಿ : ಕೊಲ್ಲೂರು ದೇವಸ್ಥಾನ: ದಾಖಲೆಯ 1.53 ಕೋಟಿ ರೂ. ಹುಂಡಿ ಹಣ ಸಂಗ್ರಹ

ಸಚಿವ ಗೋಪಾಲಯ್ಯ ವಿರುದ್ಧ ವಾಗ್ಧಾಳಿ:
ಮಹಾಲಕ್ಷ್ಮೀಲೇಔಟ್‌ ಶಾಸಕ ಹಾಗೂ ಅಬಕಾರಿ ಸಚಿವ ಕೆ. ಗೋಪಾಲಯ್ಯ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ ಕುಮಾರಸ್ವಾಮಿ, ಈ ಕ್ಷೇತ್ರದಲ್ಲಿ ಒಬ್ಬ ಮಹಾನುಭಾವ ಇದ್ದ. ಆತನಿಗೆ ಎರಡು ಬಾರಿ ಟಿಕೆಟ್‌ ಕೊಟ್ಟೆ. ನನಗೆ ಟೋಪಿ ಹಾಕಿ ಹೋದ. ಸ್ವಾಮೀಜಿ ಒಬ್ಬರು, ಅಂತ ಏನೋ ತಪ್ಪು ಮಾಡಿಕೊಂಡಿದ್ದಾನೆ, ಒಂದು ಬಾರಿ ಟಿಕೇಟ್‌ ಕೊಡಿ ಎಂದರು. ಅವರ ಸಲಹೆ ಮೇರೆಗೆ ಟಿಕೆಟ್‌ ಕೊಟ್ಟೆ. ಆಮೇಲೆ ಸಾವಿರಾರು ಕೋಟಿ ರೂ. ಅನುದಾನ ಕೊಟ್ಟೆ ಈ ಕ್ಷೇತ್ರಕ್ಕೆ ಎಂದರು ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್‌ ಹಾಕಿಕೊಂಡು ಲೂಟಿ ಮಾಡಲಾಗುತ್ತಿದೆ. ವೈನ್‌ ಸ್ಟೋಭಿಗಳಿಂದ ವಸೂಲಿ ಮಾಡಲಾಗುತ್ತಿದೆ. ಪಾಪದ ಹಣವನ್ನು ಲೂಟಿ ಮಾಡಿ ಮೆರೆಯುತ್ತಿದ್ದಾರೆ. ಅದೇ ಹಣವನ್ನು ಮುಂದಿನ ಚುನಾವಣೆಯಲ್ಲಿ ಮತದಾರರಿಗೆ ಹಂಚುತ್ತಾರೆ ಎಂದು ಅವರು ದೂರಿದರು.

Advertisement

ಕಾರ್ಯಕ್ರಮದಲ್ಲಿ ಪಕ್ಷದ ಕೋರ್‌ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಶೆಂಪೂರ್‌, ವಿಧಾನ ಪರಿಷತ್‌ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ಟಿ.ಎ.ಶರವಣ, ಪಕ್ಷದ ಹಿರಿಯ ಮುಖಂಡ ರಾಜಣ್ಣ, ಪಕ್ಷದ ನಗರದ ಘಟಕದ ಅಧ್ಯಕ್ಷ ಪ್ರಕಾಶ ಮುಂತಾದವರು ವೇದಿಕೆಯಲ್ಲಿದ್ದರು.

“ಬಿಜೆಪಿ ಬಿಬಿಎಂಪಿ ಚುನಾವಣೆ ಮಾಡಲ್ಲ. ಅವರಿಗೆ ಅಷ್ಟು ಧೈರ್ಯ ಇಲ್ಲ. ನ್ಯಾಯಾಲಯ ಆದೇಶ ಮಾಡಿದೆ. ಆದರೂ ಅವರು ಕೋರ್ಟ್‌ ಆದೇಶವನ್ನು ಪಾಲಿಸುತ್ತಾರೆ ಎಂಬ ನಂಬಿಕೆ ಇಲ್ಲ.
– ಸಿ.ಎಂ. ಇಬ್ರಾಹೀಂ, ಜೆಡಿಎಸ್‌ ರಾಜ್ಯಾಧ್ಯಕ್ಷ.

Advertisement

Udayavani is now on Telegram. Click here to join our channel and stay updated with the latest news.

Next