Advertisement

ಮಡಿಕೇರಿಯಲ್ಲಿ “ಸರ್ವಜನಾಂಗದ ಶಾಂತಿಯ ತೋಟ’ಸಮಾವೇಶ: ಎಚ್‌.ಡಿ.ಕುಮಾರಸ್ವಾಮಿ

10:00 PM Aug 23, 2022 | Team Udayavani |

ಬೆಂಗಳೂರು: ಕೊಡಗಿನಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಅಲ್ಲಿನ ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದು, ಪ್ರಕೃತಿ ಸೌಂದರ್ಯದ ಕರ್ನಾಟಕದ ಕಾಶ್ಮೀರವನ್ನು ಜಮ್ಮು- ಕಾಶ್ಮೀರವನ್ನಾಗಿ ಮಾಡಲು ಹೊರಟಿವೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಡಗಿನಲ್ಲಿ ಶಾಂತಿ ಕಾಪಾಡಲು ನಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ. ಜತೆಗೆ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದಿದ್ದೇನೆ. ಸರ್ಕಾರ ಜಾರಿ ಮಾಡಿರುವ ನಿಷೇಧಾಜ್ಞೆ ತೆರವಾದ ನಂತರ ಮಡಿಕೇರಿಯಲ್ಲಿ ಸರ್ವಜನಾಂಗದ ಶಾಂತಿಯ ತೋಟ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಕರಾವಳಿಯ ರೀತಿಯಲ್ಲೇ ಕೊಡಗಿನಲ್ಲಿಯೂ ಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಆಗುತ್ತಿದೆ. ಇದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ.

ಸೌಹಾರ್ದಯುತ ನಾಡಿನ ಜನತೆಗೆ ಜಾಗೃತಿ ಮೂಡಿಸಬೇಕು. ಜನ ಶಾಂತಿಯಿಂದ ಬದುಕಲು ಕಾಪಾಡಬೇಕು. ಕೊಡಗಿನಲ್ಲಿ 144 ಸೆಕ್ಷನ್‌ ಮುಗಿದ ನಂತರ ನಾನು ಮತ್ತು ನಮ್ಮ ಪಕ್ಷದ ಅಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಸೇರಿ ಕೊಡಗಿಗೆ ಹೋಗಿ ಶಾಂತಿ ಸಭೆ ನಡೆಸುತ್ತಿವೆ ಎಂದು ಹೇಳಿದರು. ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಇದ್ದರು.

ಮೋದಿ ಬಂದು ಏನು ಸಂದೇಶ ಕೊಡ್ತಾರೆ?
ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆ ಮೇಲೆ ಸ್ವಾತಂತ್ರ್ಯ ದಿನಾಚರಣೆ ದಿನದಂದು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡಿದ್ದಾ ರೆ. ಆದರೆ, ಕರ್ನಾಟಕದಲ್ಲಿ ಅವರದೇ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಹೀಗಿರುವಾಗ ಅವರು ಮಂಗಳೂರಿಗೆ ಬಂದು ಯಾವ ಸಂದೇಶ ಕೊಡುತ್ತಾರೆ. ದೇಶಕ್ಕೆ ಆರ್ಥಿಕ ಶಕ್ತಿ ಕೊಡುವಂತಹ ನಗರ ಮಂಗಳೂರು. ಆದರೆ ದೇಶಕ್ಕೆ ಮಾರಕ ಆಗುವಂತ ವಾತಾವರಣವನ್ನು ಅಲ್ಲಿ ಸೃಷ್ಟಿ ಮಾಡಿದ್ದಾರೆ. ಮತ್ತೆ ಇದೇ ಸಂಘರ್ಷ ಮುಂದುವರಿದರೆ ಪ್ರಧಾನಿ ಬಂದರೂ ಏನು ಪ್ರಯೋಜನ ಎಂದು ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next