Advertisement

ಸ್ಟಾಕ್‌ ಕ್ಲಿಯರೆನ್ಸ್‌ ಸೇಲ್‌ ಬೋರ್ಡ್‌ ಬಜೆಟ್‌: ಕುಮಾರಸ್ವಾಮಿ

11:52 PM Feb 17, 2023 | Team Udayavani |

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್‌ ವರ್ಷಕ್ಕೊಮ್ಮೆ ಜಾತ್ರೆ ಮುಗಿದ ಮೇಲೆ ಅಲ್ಲಿನ ಮಳಿಗೆಗಳಲ್ಲಿ ಸ್ಟಾಕ್‌ ಕ್ಲಿಯರೆನ್ಸ್‌ ಸೇಲ್‌ ಬೋರ್ಡ್‌ ಹಾಕಿ ರಿಯಾಯಿತಿ ದರದ ಘೋಷಣೆ ಮಾಡುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

Advertisement

ಎರಡು ತಿಂಗಳಲ್ಲಿ ಚುನಾವಣೆ ಇಟ್ಟುಕೊಂಡು ಶಾಸ್ತ್ರಕ್ಕೆ ಮಂಡಿಸಿರುವ ರಾಜ್ಯ ಮುಂಗಡ ಪತ್ರ ರಾಜ್ಯದ ಜನರ ಸಂಕಷ್ಟಗಳನ್ನು ಪರಿಹಾರ ಮಾಡಲು ಮೂರು ಕಾಸಿನ ಕಿಮ್ಮತ್ತು ಕೊಟ್ಟಿಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಹೇಳಿದ್ದಾರೆ. ಮೂರು ವರ್ಷಗಳಲ್ಲಿ ಬಿಜೆಪಿ ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದೆ. ಕೈಗಾರಿಕೆ, ಮೂಲಸೌಕರ್ಯ, ಸಾರಿಗೆ, ಶಿಕ್ಷಣ, ಕೃಷಿ ಸೇರಿ ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕ ಬಸವಳಿದಿದೆ. ಕೇಂದ್ರದ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವ ದುಃಸ್ಥಿತಿ ಬಂದಿದೆ.

ಕೇಂದ್ರ ಸರಕಾರವು ರಾಜ್ಯಕ್ಕೆ ಅನುದಾನವನ್ನು ಭಿಕ್ಷೆಯಂತೆ ಹಾಕುತ್ತಿದೆ. ಹೀಗಿರುವಾಗ ಈ ಬಜೆಟ್ಟಿನ ಹಣೆಬರಹಕ್ಕೆ ದಿಕ್ಕೆಲ್ಲಿ ಎಂದು ಪ್ರಶ್ನಿಸಿದ್ದಾರೆ. ಬೊಮ್ಮಾಯಿ ಬಜೆಟ್‌ಗೆ ಯಾವುದೇ ಮಹತ್ವ ಇಲ್ಲ. ಇದು ಅತ್ಯಂತ ನೀರಸ, ಮಾತ್ರವಲ್ಲ ನಿರುಪಯುಕ್ತ ಕೂಡ. ಚುನಾವಣೆ ಅನಂತರ ಬರುವ ಸರಕಾರ ಮಂಡಿಸುವ ಬಜೆಟ್‌ ಜಾರಿಗೆ ಬರುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎನ್ನುವುದು ಎಲ್ಲ ಕನ್ನಡಿಗರಿಗೂ ಗೊತ್ತಿರುವ ಸಂಗತಿ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next