Advertisement

ಸಿದ್ದರಾಮಯ್ಯ ಸರಕಾರವೋ ಹೈಕಮಾಂಡಿನ ಹಂಗಿನ ಸರಕಾರವೋ?

09:28 PM Jun 13, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಬದಲಿಗೆ ಹೈಕಮಾಂಡಿನ ಹಂಗಿನ ಸರಕಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

Advertisement

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಬಗ್ಗೆ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಅವರು; ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?? ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಟೀಕಿಸಿದ್ದಾರೆ.

ಅಲ್ಲದೆ, ‘ಹತ್ತನೇ ನಂಬರಿನ ಹಂಗಿನ ಸರಕಾರ’ ಎಂದು ಹ್ಯಾಷ್ ಟ್ಯಾಗ್ ಹಾಕಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ.

Advertisement

ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next