Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮುಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿ¨ªಾರೆ. ನನ್ನ ವಿರುದ್ಧ 2006ರಲ್ಲಿ ಗಣಿ ಆರೋಪ ಮಾಡಿದಾಗ ನಾನೊಬ್ಬನೇ ಎದುರಿಸಿದೆ. ಶಾಸಕರು, ಸಚಿವರನ್ನು ಅಡ್ಡ ಇಟ್ಟುಕೊಂಡು ರಕ್ಷಣೆ ಪಡೆಯುವ ಕೆಲಸ ಮಾಡಲಿಲ್ಲ. ಹೇಡಿತನ ಪ್ರದರ್ಶಿಸಲಿಲ್ಲ, ಧೈರ್ಯವಾಗಿ ಒಬ್ಬನೇ ಎದುರಿಸಿದೆ ಎಂದರು.
ರಾಜ್ಯದ ಸಾಂವಿಧಾನಿಕ ಮುಖ್ಯಸ್ಥ ರಾಗಿರುವ ರಾಜ್ಯಪಾಲರ ವಿರುದ್ಧ ಅತ್ಯಂತ ಕೆಟ್ಟದಾಗಿ, ಅವಹೇಳನ ಕಾರಿಯಾಗಿ ಪ್ರತಿಭಟನೆ ಮಾಡಿಸುತ್ತಿದೆ. ಸಚಿವರು, ಶಾಸಕರು ರಾಜ್ಯಪಾಲರ ಬಗ್ಗೆ ಬಹಳ ಅಗೌರವದಿಂದ ನಡೆದುಕೊಳ್ಳುತ್ತಿ¨ªಾರೆ. ಬೇರೆ ಯಾವ ರಾಜ್ಯದಲ್ಲಿ ಇಂಥ ಕೆಟ್ಟ ಪರಿಸ್ಥಿತಿಯನ್ನು ನಾನು ನೋಡಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.