ಕುರುಗೋಡು: ಭೂಮಿ ಕಳೆದುಕೊಂಡ ರೈತರು ನ್ಯಾಯಕ್ಕಾಗಿ ಕಾರ್ಖಾನೆಗಳ ವಿರುದ್ಧ ನೆಡೆಸುತ್ತಿರುವ ಮುಷ್ಕರ 39ನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಇಲ್ಲಿ ವರೆಗೂ ಯಾವ ಅಧಿಕಾರಿಗಳು ಮತ್ತು ಜನಪ್ರತಿನಿದಿಗಳು ಬಂದು ಸಮಸ್ಯೆ ಆಲಿಸಲು ಮುಂದಾಗದೆ ಇರುವುದು ದುರಂತ ವಾಗಿದೆ ಎಂದು ನಮ್ಮ ಕರ್ನಾಟಕ ರಕ್ಷಣೆ ವೇದಿಕೆ ಅಧ್ಯಕ್ಷ ಸಂಪತ್ ಕುಮಾರ್ ಕಳವಳ ವ್ಯಕ್ತಪಡಿಸಿದರು.
ಆದ್ದರಿಂದ ರೈತರ ಬೇಡಿಕೆಗಳು ಈಡೇರುವವರೆಗೂ ನ್ಯಾಯ ಸಿಗುವವರೆಗೆ ಹೋರಾಟ ಕೈಬೀಡುವ ಪ್ರೇಶ್ನೆಯೆ ಇಲ್ಲ ಎಂದರು.
ಕುಡಿತಿನಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಕಾರ್ಖಾನೆ ಗಳಿಗೆ ಭೂಮಿ ನೀಡಿ 13ವರ್ಷ ಕಳೆದಿದೆ.ಯಾವುದೇ ಕಾರ್ಖಾನೆ ಸ್ಥಾಪನೆಯಾಗದ ಹಿನ್ನೆಲೆಯಲ್ಲಿ ಮಾಲಿಕರ ವಿರುದ್ಧ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು, ಇದರ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಸಾಂತ್ವನ ಹೇಳುವ ಸೌಜನ್ಯ ಕೂಡ ಇಲ್ಲದಿರುವುದು ನಾಚಿಕೆ ಗೇಡಿನ ಸಂಗತಿಯಾಗಿದೆ ಎಂದರು.
ಅಲ್ಲದೇ ಇದೇ ಜನವರಿ ತಿಂಗಳ 30 ರಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಒಂದು ದಿನದ ಅನಿರ್ದಿಷ್ಟಾವದಿಗೆ ಸಂಪೂರ್ಣ ಬೆಂಬಲ ನೀಡಿ ಅನ್ಯಾಯವಾದ ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸರಕಾರಕ್ಕೆ ಎಚ್ಚರಿಕೆ ನೀಡಲಿದ್ದಾರೆ ಎಂದು ತಿಳಿಸಿದರು.
ಜೊತೆಗೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಸ್ಥಳಕ್ಕೆ ಬಂದು ಧರಿಣಿಗೆ ಕೈ ಜೋಡಿಸಿ ಈ ಭಾಗದ ರೈತರಿಗೆ ಆಗಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಮೂಲಕ ಬೆಂಬಲ ಸೂಚಿಸಲಿದ್ದಾರೆ ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಕುರೆಕುಪ್ಪ ಸೋಮಪ್ಪ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಇಂದು ನಡೆದ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡರು, ರೈತ ಮುಖಂಡರು, ಭೂಮಿಕಳೆದುಕೊಂಡ ರೈತರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಇದನ್ನೂ ಓದಿ : ಹುಣಸೂರಿನ ರೌಡಿಶೀಟರ್ ವೀಲ್ ವಾಸಿಂಗೆ 1 ವರ್ಷ ಗಡಿಪಾರು ಶಿಕ್ಷೆ