ಶಿಡ್ಲಘಟ್ಟ : ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೋಲಾರ ಜಿಲ್ಲೆಯ ಮುಳಬಾಗಿಲು ನಿಂದ ಆರಂಭವಾಗಿರುವ ಪಂಚರತ್ನ ಯಾತ್ರೆಯು ನಿನ್ನೆಯ ದಿನ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿಗೆ ಪ್ರವೇಶ ಮಾಡಿತ್ತು.
ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೈ ಹುಣಸೇನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ಯಾತ್ರೆಗೆ ಜೆಡಿಎಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಚಿಂತಾಮಣಿ ತಾಲೂಕಿನ ಪವಿತ್ರ ಯಾತ್ರಾಸ್ಥಳ ಕೈವಾರದಲ್ಲಿ ಪಂಚರತ್ನ ಯಾತ್ರೆಯನ್ನು ಆರಂಭಿಸಿ ಚಿನ್ನಸಂದ್ರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ ಬಳಿಕ ಶಿಡ್ಲಘಟ್ಟ ತಾಲೂಕಿನ ವೈ.ಹುಣಸೇಹಳ್ಳಿ ಮೂಲಕ ಪಂಚರತ್ನ ಯಾತ್ರೆ ಪ್ರವೇಶ ಮಾಡಿದೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಯುವ ಮುಖಂಡರು ರವಿಕುಮಾರ್ ಅವರ ನೇತೃತ್ವದಲ್ಲಿ ಸಹಸ್ರಾರು ಜೆಡಿಎಸ್ ಕಾರ್ಯಕರ್ತರು ಪಂಚರತ್ನ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿ ಕರ್ನಾಟಕ ರಾಜ್ಯಾದ್ಯಂತ ಪಂಚರತ್ನ ಯಾತ್ರೆಯ ಅಲೆ ಬೀಸುತ್ತಿದೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅದ್ಭುತವಾಗಿ ಸ್ವಾಗತವನ್ನು ಕೋರಿ ಜನ ಆಶೀರ್ವಾದ ಮಾಡುತ್ತಿದ್ದಾರೆ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ನನ್ನಿಂದ ತಪ್ಪಾಗಿದೆ ಮೇಲೂರು ರವಿಕುಮಾರ್ ಅವರು ನೊಂದಿದ್ದಾರೆ ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರು ಅವರಿಗೆ ಆಶೀರ್ವದಿಸಿ ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಕರ್ನಾಟಕ ರಾಜ್ಯದಲ್ಲಿ ಜೆಡಿಎಸ್ ಸರ್ಕಾರವನ್ನು ರಚನೆ ಮಾಡಲು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಹರಿದು ಬಂದ ಜನಸಾಗರ: ರೇಷ್ಮೆ ನಗರ ಎಂದು ಖ್ಯಾತಿ ಹೊಂದಿರುವ ಶಿಡ್ಲಘಟ್ಟ ತಾಲೂಕಿನ ವೈ.ಹುಣಸೇನಹಳ್ಳಿ ಗ್ರಾಮದಲ್ಲಿ ಪ್ರವೇಶ ಮಾಡಿದ ಪಂಚ ರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಜನಸಾಗರವೇ ಹರಿದು ಬಂದಿದೆ ಕ್ಷೇತ್ರದ ಮೂಲೆ ಮೂಲೆಗಳಿಂದ ಸಹಸ್ರಾರು ಜೆಡಿಎಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿ ಮಾಜಿ ಮುಖ್ಯಮಂತ್ರಿ ಎಚ್ ಡಿ. ಕುಮಾರಸ್ವಾಮಿ ಅವರ ಭಾಷಣವನ್ನು ಆಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡ ಮೇಲೂರು ರವಿಕುಮಾರ್, ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಜೆಕೆ ಕೃಷ್ಣಾರೆಡ್ಡಿ, ವಿಧಾನಪರಿಷತ್ತಿನ ಸದಸ್ಯ ರಮೇಶ್ ಗೌಡ, ಇಂಚರ ಗೋವಿಂದರಾಜು, ಮಾಜಿ ಸದಸ್ಯ ತೂಪಲ್ಲಿ ಚೌಡರೆಡ್ಡಿ, ಮುಖಂಡರಾದ ಕೋಲಾರ ಶ್ರೀನಾಥ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ. ಮುನೇಗೌಡ, ಶಿಡ್ಲಘಟ್ಟ ತಾಲೂಕು ಜೆಡಿಎಸ್ ಅಧ್ಯಕ್ಷ ವೆಂಕಟೇಶ್, ಮೇಲೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಮೇಶ್, ಮಾಜಿ ಅಧ್ಯಕ್ಷ ಕೆ.ಎಸ್.ಮಂಜುನಾಥ್, ತಾಪಂ ಮಾಜಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ರೆಡ್ಡಿ, ತಾದೂರು ರಘು, ಜೆ.ವಿ. ಸದಾಶಿವ,ಬಂಕ್ ಮುನಿಯಪ್ಪ, ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ರಾಜ್ಯದೆಲ್ಲೆಡೆ ಸರ್ಕಾರಿ ಗೋಶಾಲೆಯ 31 ಗೋವುಗಳನ್ನು ದತ್ತು ಪಡೆಯಲಿದ್ದಾರಂತೆ ಕಿಚ್ಚ ಸುದೀಪ್