Advertisement
ರಾಮನಗರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡುತ್ತಾ ಡಿಕೆ ಸಹೋದರರ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದರು.
Related Articles
Advertisement
ನೈಸ್ ಯೋಜನೆಗೆ ದೇವೇಗೌಡರೇ ಒಪ್ಪಂದ ಮಾಡಿಕೊಂಡಿದ್ದು. ಇಲ್ಲ ಎಂದು ನಾನೆಲ್ಲಿ ಹೇಳಿದೆ, ಅವರು ರಸ್ತೆ ಆಗಲಿ ಎಂದು ಒಪ್ಪಂಡ ಮಾಡಿಕೊಂಡರು. ಬೆಂಗಳೂರು-ಮೈಸೂರು ಜನಕ್ಕೆ ಅನುಕೂಲವಾಗಲಿ ಎಂದು ಅವರು ಈ ಯೋಜನೆಗೆ ಅವರು ಒಪ್ಪಿಗೆ ನೀಡಿದರು. 1995 ಅಥವಾ 1986ನೇ ಇಸವಿ ಇರಬೇಕು, ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿ ಆಗಿದ್ದರು. ಈ ಜಿಲ್ಲೆಯ ಮಾಯಗಾನಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿ 15-20 ಶಾಲಾ ಮಕ್ಕಳು ತೀರಿಕೊಂಡರು. ಆವತ್ತೇ ಬೆಂಗಳೂರು-ಮೈಸೂರು ನಡುವೆ ನಾಲ್ಕುಪಥದ ಹೆದ್ದಾರಿ ಮಾಡಬೇಕು ಎಂದು ದೇವಗೌಡರು ತೀರ್ಮಾನ ಮಾಡಿದರು. ಹಣ ಇಲ್ಲ ಎನ್ನುವ ಕಾರಣಕ್ಕೆ ಹೆಗಡೆ ಅವರ ಕಾಲದಲ್ಲಿ ಆ ಯೋಜನೆ ಆಗಲಿಲ್ಲ. ಕೊನೆಗೆ ದೇವೇಗೌಡರು ಮುಖ್ಯಮಂತ್ರಿ ಆದ ಮೇಲೆ ಈ ಯೋಜನೆಗೆ ಚಾಲನೆ ನೀಡಿದರು ಎಂದರು ಅವರು ಮಾಹಿತಿ ನೀಡಿದರು.
ನೈಸ್ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ?
ದೇವೇಗೌಡರು ಮಾಡಿಕೊಂಡ ಒಪ್ಪಂದದಂತೆ ರಸ್ತೆ ಆಗಿದ್ದಿದ್ದರೆ ಏಷ್ಯಾಖಂಡದಲ್ಲಿಯೇ ಬೆಂಗಳೂರು ಮೈಸೂರು ನಗರಗಳು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಆಗುತ್ತಿದ್ದವು. ವಾಣಿಜ್ಯ ಚಟುವಟಿಕೆಗಳು ಹೆಚ್ಚಿ ಜನರಿಗೆ ಜೀವನೋಪಾಯ ಸಿಗುತ್ತಿತ್ತು. ಆದರೆ, ಈ ಲೂಟಿಕೋರರು ಮಾಡಿದ್ದೇನು? ಬೆಂಗಳೂರು ಸುತ್ತಾಮುತ್ತ ರೈತರ ಭೂಮಿಯನ್ನು ಕೊಳ್ಳೆ ಹೊಡೆದರು. ನೈಸ್ ಕಂಪನಿ ಮಾಡಿರುವ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ? ಈ ಬಗ್ಗೆ ದಾಖಲೆಗಳನ್ನೇ ಹೊರಗಿಡುತ್ತೇನೆ. 2004ರಲ್ಲಿ ಇವರ ಅಣ್ಣ (ಡಿಕೆ ಸುರೇಶ್ ಅಣ್ಣ ಡಿ.ಕೆ.ಶಿವಕುಮಾರ್) ರಾಮನಗರ ಜಿಲ್ಲೆ ಉದ್ಧಾರ ಮಾಡುವುದಕ್ಕೆ ಮಂತ್ರಿ ಆಗಿದ್ದರೋ ಅಥವಾ ನೈಸ್ ಕಂಪನಿಯನ್ನು ಉದ್ಧಾರ ಮಾಡಿ ದುಡ್ಡು ಹೊಡೆಯೋದಕ್ಕೆ ಮಂತ್ರಿ ಆಗಿದ್ದರೋ? ಎಲ್ಲ ದಾಖಲೆಗಳನ್ನು ನಾಳೆ ನಾಡಿದ್ದರಲ್ಲಿಯೇ ಬಿಡುಗಡೆ ಮಾಡುತ್ತೇನೆ ಎಂದು ಅವರು ಪ್ರಕಟಿಸಿದರು.
2013ರಿಂದ 2018ರವರೆಗೆ ಡಿ.ಕೆ.ಶಿವಕುಮಾರ್ ಮಂತ್ರಿ ಆಗಿದ್ದರಲ್ಲಾ? ಆವಾಗ ಇವರು ರಾಮನಗರಕ್ಕೆ ನೀರನ್ನು ಯಾಕೆ ಕೊಡಲಿಲ್ಲ. ಅವಾಗ ಏನ್ ಮಾಡ್ತಾ ಇದ್ದರು? ಬಂಡೆ ಹೊಡೆದಕೊಂಡು ಕೂತಿದ್ದರಾ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.
ಮೆಡಿಕಲ್ ಕಾಲೇಜ್ ಕನಕಪುರಕ್ಕೆ ಯಾಕೆ?
ರಾಮನಗರ ಜಿಲ್ಲೆ ಜನರಿಗೆ ನನ್ನಿಂದ ಕಿಂಚಿತ್ತೂ ಅನ್ಯಾಯ ಆಗಿಲ್ಲ. ಜಿಲ್ಲೆಯ ಜನರನ್ನು ನಾನು ತಂದೆ ತಾಯಿ ಸ್ಥಾನದಲ್ಲಿಟ್ಟು ನೋಡುವವನು. ಸ್ವಷ್ಟವಾಗಿ ಹೇಳಬಯಸುತ್ತೇನೆ. ಕಳೆದ ಚುನಾವಣೆ ಫಲಿತಾಂಶದ ಬಗ್ಗೆ ನಾನು ಜನರಿಗೆ ದೋಷ ಕೊಡಲ್ಲ. ನಾನು ಈ ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಏನು ಎಂಬುದು ಆ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಮನಗರಕ್ಕೆ ರಾಜೀವಗಾಂಧಿ ವೈದ್ಯಕೀಯ ವಿಶ್ವಾವಿದ್ಯಾಲಯ ಕೊಟ್ಟವನು ನಾನು. ಆಮೇಲೆ ಪ್ರತ್ಯೇಕವಾಗಿ ಇವರ ಹಿಂಸೆ ತಾಳಲಾರದೆ 100 ಕೋಟಿ ಮೀಸಲಿಟ್ಟು ಕನಕಪುರಕ್ಕೆ ಒಂದು ಮೆಡಿಕಲ್ ಕಾಲೇಜ್ ಮಂಜೂರು ಮಾಡಿದೆ. ಆಮೇಲೆ ಬಂದ ಬಿಜೆಪಿ ಸರಕಾರದವರು ಅದನ್ನು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋದರು. ಈಗ ರಾಮನಗರದಲ್ಲಿ ಮಾಡಬೇಕಾದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ತೆಗೆದುಕೊಂಡು ಹೋಗ್ತಾ ಇದ್ದಾರೆ, ಎಲ್ಲೋ ಮೂಲೆಗೆ. ಇದು ಇವರು ರಾಮನಗರಕ್ಕೆ ಕೊಡುತ್ತಿರುವ ಬಳುವಳಿ. ಜನರು ಅರ್ಥ ಮಾಡಿಕೊಳ್ಳಬೇಕು. ಜಿಲ್ಲಾ ಕೇಂದ್ರ ಅಭಿವೃದ್ಧಿ ಆಗೋದು ಅವರಿಗೆ ಇಷ್ಟವಿಲ್ಲ ಎಂದರು ಅವರು.
I.N.D.A ಮೈತ್ರಿಕೂಟದ ಸಭೆ ಮಾಡಿದ್ದು ಎಲ್ಲಿ?
ನನ್ನ ಬಗ್ಗೆ ಹೋಟೆಲ್ ನಲ್ಲಿ ಇದ್ದೆ ಎಂದು ಹೇಳುತ್ತಾರಲ್ಲ, ಇತ್ತೀಚೆಗೆ ಇವರು I.N.D.A ಮೈತ್ರಿಕೂಟದ ಸಭೆ ಮಾಡಿದ್ದು ಎಲ್ಲಿ? ಅದೇ ಹೋಟೆಲ್ ನಲ್ಲಿ ತಾನೇ. ನನ್ನಷ್ಟು ಜನಕ್ಕೆ ಹತ್ತಿರವಾಗಿ ಸಿಗೋನು ಈ ಬೂಮಿ ಮೇಲೆ ಇನ್ನಾರಾದರೂ ಇದ್ದಾರಾ? ಇವರಿಂದ ನಾನು ಪಾಠ ಕಲಿಯಬೇಕಾ? ಎಂದು ಕುಮಾರಸ್ವಾಮಿ ಅವರು ಗುಡುಗಿದರು.
ಇದನ್ನೂ ಓದಿ: Arekere village problem: ಅರೆಕೆರೆಗೆ ಶಾಸಕರು, ಅಧಿಕಾರಿಗಳ ತಂಡ ಭೇಟಿ