ರಾಯಚೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಸಮೇತರಾಗಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.
ಮಂಚಾಲಮ್ಮ ದೇವಿ ಹಾಗೂ ರಾಯರ ಮೂಲ ಬೃಂದಾವನಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಎಚ್ ಡಿಕೆ ದಂಪತಿಯನ್ನು ಗೌರವಿಸಿದರು.
ಇದನ್ನೂ ಓದಿ:ದೇಶದಲ್ಲಿ ಒಡಕು ಮೂಡಿಸುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ: ಪ್ರಧಾನಿ ಮೋದಿ
ನಂತರ ಶ್ರೀಮಠದ ಗೋಶಾಲೆ, ಅಭಯಾಂಜನೇಯ ಸ್ವಾಮಿ ದೇವಸ್ಥಾನ, ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ರಾಮಮಂದಿರದ ಅಭಿವೃದ್ಧಿ ಕಾರ್ಯಗಳನ್ನು ಶ್ರೀಗಳ ಜತೆ ವೀಕ್ಷಿಸಿದರು.
Related Articles
ಪಂಚರತ್ನ ಯಾತ್ರೆಯಲ್ಲಿರುವ ಅವರು ಇಂದು ಸಿಂಧನೂರು ತಾಲೂಕಿನಲ್ಲಿ ಯಾತ್ರೆ ನಡೆಸಲಿದ್ದಾರೆ.