Advertisement

ಮೂರು ತಿಂಗಳ ಬಾಡಿಗೆ ವಿನಾಯಿತಿ ಘೋಷಿಸಿ: ಪ್ರಧಾನಿ ಮೋದಿಗೆ ಎಚ್ ಡಿ ಕುಮಾರಸ್ವಾಮಿ ಆಗ್ರಹ

06:05 PM Apr 12, 2020 | keerthan |

ಬೆಂಗಳೂರು: ಈಗಾಗಲೇ ಅನೇಕ ದೇಶಗಳು ಆರ್ಥಿಕ ಮುಗ್ಗಟ್ಟಿನಿಂದ ಬಾಡಿಗೆದಾರರನ್ನು ಕಾಪಾಡಲು ಕೋವಿಡ್-19 ಸಂಕಟದ ಅವಧಿಗೆ ಬಾಡಿಗೆ ವಿನಾಯಿತಿಯನ್ನು ಘೋಷಿಸಿವೆ. ದೆಹಲಿಯ ಸರಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಯೋಜನೆ ಘೋಷಿಸಿದೆ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯಿತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ದೆಹಲಿ, ಮುಂಬೈ, ಬೆಂಗಳೂರಿನಂತಹ ನಗರಗಳಲ್ಲಿ ವೃತ್ತಿ ಮಾಡುವ ಹಾಗೂ ಇಲ್ಲಿನ ಸಂಸ್ಥೆಗಳಲ್ಲಿ ಓದುತ್ತಿರುವ ಅನೇಕ ಜನರ ಆರ್ಥಿಕ ಸ್ಥಿತಿ ನಾಜೂಕಾಗಿದೆ. ಇಂತಹ ಸಂದರ್ಭದಲ್ಲಿ ಮನೆ, ಪಿಜಿ, ಹಾಸ್ಟೆಲ್ ಮಾಲೀಕರು ಎಂದಿನಂತೆ ಬಾಡಿಗೆ ವಸೂಲಿಗೆ ಇಳಿಯದೆ ಉದಾರತೆ ತೋರಲಿ. ಸರಕಾರ ಬಾಡಿಗೆ ವಿನಾಯಿತಿ ಘೋಷಿಸಿ ಜನಸಾಮಾನ್ಯನ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಆರ್ಥಿಕ ಚಟುವಟಿಕೆಯೇ ಸಮಗ್ರವಾಗಿ ಸ್ಥಗಿತಗೊಂಡ ಈ ದಿನಗಳಲ್ಲಿ ಎಂದಿನಂತೆ ಪ್ರತಿ ತಿಂಗಳು ಮನೆ ಬಾಡಿಗೆಯನ್ನು ಕೊಡಲೇಬೇಕು ಅಂತ ಮನೆ ಮಾಲೀಕರು ಪಟ್ಟು ಹಿಡಿದರೆ ಆರ್ಥಿಕ ಹೊರೆಯನ್ನು ತಾಳಲಾರದ ಬಾಡಿಗೆದಾರ ಇನ್ನೊಂದು ಮನೆ ಹುಡುಕಿಕೊಂಡು ಹೋಗುವ ಸ್ಥಿತಿಯೂ ಇಲ್ಲವಾದ್ದರಿಂದ, ಕೇಂದ್ರ ಸರಕಾರ ಈ ಕೂಡಲೇ ಬಾಡಿಗೆ ವಿನಾಯಿತಿ ಯೋಜನೆಯನ್ನು ಘೋಷಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next