Advertisement

ಬಿಜೆಪಿ-ಕಾಂಗ್ರೆಸ್‌ಗಿಂತ ಹೆಚ್ಚು ಸ್ಥಾನ ಜೆಡಿಎಸ್‌ಗೆ: ಎಚ್‌ಡಿಕೆ ವಿಶ್ವಾಸ

08:52 PM Jul 02, 2022 | Team Udayavani |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಜೆಡಿಎಸ್‌ಗೆ ಹೆಚ್ಚು ಸ್ಥಾನಗಳು ಬರಲಿದ್ದಾವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ 130 ಸೀಟು ಬರುತ್ತದೆ ಎಂಬ ಆಂತರಿಕ ಸಮೀಕ್ಷೆ ಬಗ್ಗೆ ಕೇಳಿದ್ದಕ್ಕೆ, ಅದೊಂದು ಯೋಜಿತ ಸಮೀಕ್ಷೆ, 130 ಸೀಟು ಅನ್ನುವುದೆಲ್ಲ ಸುಳ್ಳು. ಕಾಂಗ್ರೆಸ್‌ ಪಕ್ಷದ ಶಕ್ತಿ ಇರುವುದೇ 60 ರಿಂದ 65 ಸೀಟು.

ಬಿಜೆಪಿ ಲೆಕ್ಕಾಚಾರ, ಕಾಂಗ್ರೆಸ್‌ ಆಂತರಿಕ ಸಮೀಕ್ಷೆ ಎಲ್ಲವೂ ಸುಳ್ಳಾಗುತ್ತದೆ. ಎರಡೂ ರಾಷ್ಟ್ರೀಯ ಪಕ್ಷಗಳಿಗಿಂದ ಜೆಡಿಎಸ್‌ಗೆ ಹೆಚ್ಚು ಸ್ಥಾನಗಳು ಬರುತ್ತವೆ ಎಂದು ಭವಿಷ್ಯ ನುಡಿದರು.

ಇವತ್ತು ಹೇಳುತ್ತಿದ್ಧೇನೆ ಬರೆದಿಟ್ಟುಕೊಳ್ಳಿ, ಕಾಂಗ್ರೆಸ್‌ ಪಕ್ಷ 70 ಸೀಟು ದಾಟಲ್ಲ. ನಮ್ಮ ಪಕ್ಷಕ್ಕೆ ಜನತೆಯ ಮತ್ತು ದೇವರ ಆಶೀರ್ವಾದ ಇದೆ. ನಾನು ಚಾಲೆಂಜ್‌ ಮಾಡುತ್ತೇನೆ. ನಮ್ಮ ಪಕ್ಷ ಈ ಎರಡು ರಾಷ್ಟ್ರಿಯ ಪಕ್ಷಗಳಿಗಿಂತ ಮೇಲಿರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next