Advertisement
ಮಾಧ್ಯಮಗಳ ಜತೆ ಮಾತನಾಡಿದ ಅವರು, ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡುವುದಕ್ಕೆ ಕರೆ ನೀಡಲಾಗಿದೆ. ಬಂದ್ ಮಾಡುವುದರಿಂದ ಏನು ಪ್ರಯೋಜನ? ಅನುಕೂಲ ಯಾರಿಗೆ? ಅನಾನುಕೂಲ ಯಾರಿಗೆ? ಅನ್ನೋದು ಮುಖ್ಯ. ಈ ಬಂದ್ ಕರೆಯಿಂದ ಮಹಾರಾಷ್ಟ್ರಕ್ಕೆ ತೊಂದರೆ ಇಲ್ಲ. ರಾಜ್ಯದ ಜನರಿಗೆ ತೊಂದರೆ ಆಗುತ್ತದೆ ಎಂದು ಅವರು ತಿಳಿಸಿದರು.
Related Articles
Advertisement
ಪಕ್ಷದ ಯುವ ಜನತಾದಳದ ಅಧ್ಯಕ್ಷರಾದ ನಿಖಿಲ್ ಸಹ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಂದ್ ನಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದ್ದಾರೆ. ಹೋರಾಟಗಾರರು ಒಮ್ಮೆ ಈ ಬಗ್ಗೆ ಆಲೋಚನೆ ಮಾಡಲಿ ಎಂದು ಅವರು ಹೇಳಿದರು.
ಬೆಳಗಾವಿ ಕಲಾಪ ವ್ಯರ್ಥವಾಗಿದೆ
ನಾಡಿನ ಜನ ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಉತ್ತರ ಕರ್ನಾಟಕದ ಜನ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಲಿಲ್ಲ. ಸದನ ಕಲಾಪವನ್ನ ಸಂಪೂರ್ಣ ವ್ಯರ್ಥ ಮಾಡಿದ್ದಾರೆ. ಅದರಲ್ಲೂ ಮೊದಲ 5 ದಿನದ ಕಲಾಪ ಸಂಪೂರ್ಣ ವ್ಯರ್ಥವಾಗಿದೆ ಎಂದರು.
ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿಲ್ಲ. ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆಯೂ ಚರ್ಚಿಸಿಲ್ಲ. ಸಂಡೂರು ತಹಶೀಲ್ದಾರ್, ಭೈರತಿ ಬಸವರಾಜ್ ಪ್ರಕರಣಗಳ ಬಗ್ಗೆ ವೃಥಾ ಚರ್ಚೆ ನಡೆಸಿದ್ದಾರೆ. ಯಾವುದಕ್ಕೆ ಹೆಚ್ಚಿನ ಅದ್ಯತೆ ನೀಡಬೇಕಿತ್ತೋ ಅದಕ್ಕೆ ಪ್ರಾರಂಭಿಕ ಹಂತದಲ್ಲಿ ನೀಡಿಲ್ಲ. ಕೊನೆಯ ಎರಡು ದಿನವೆಂದು ಆಗ ಕೂಡ ಸರಿಯಾದ ಚರ್ಚೆ ನಡೆಯಲಿಲ್ಲ.
ಸರ್ಕಾರದವರು ಕೊನೆಯಲ್ಲಿ ಮತಾಂತರ ವಿಚಾರ ತಂದರು. ಸದನದ ಕಲಾಪ ನಡೆಯಬೇಕೆಂಬ ಆಶಯ ಈಡೇರಲಿಲ್ಲ. ಕೆಲವರು ಈ ನಿಟ್ಟಿನಲ್ಲಿ ಯೋಚಿಸುತ್ತಾರೆ. ಆದರೆ ಅವರ ಆಶಯ ಈಡೇರಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.