Advertisement
ಹಿಂದಿ ದಿವಸ ಆಚರಣೆ ಖಂಡಿಸಿ ವಿಧಾನಸೌಧ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ನಡೆಸಿದ ಪ್ರತಿಭಟನೆ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
Related Articles
Advertisement
ಒಂದು ಭಾಷೆ ಒಂದು ರಾಷ್ಟ್ರ ಎಂಬ ಗೃಹ ಸಚಿವರ ಹೇಳಿಕೆ ಸರಿಯಲ್ಲ. ಕೇವಲ ಹಿಂದಿ ಒಂದು ಭಾಷೆಯಿಂದ ಭಾರತ ಒಂದಾಗಿ ಉಳಿದಿಲ್ಲ. ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ. ಅದನ್ನೇ ಹಾಳು ಮಾಡಿದರೆ ದೇಶವನ್ನು ಓಡೆದಂತೆ. ಅವರು ಕೇಲ ಭಾವನಾತ್ಮಕ ವಿಚಾರ ಕೆಣಕುತ್ತಾ ದೇಶವನ್ನು ವಿಭಜಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಇವತ್ತು ಉತ್ತರ ಭಾರತದ ಕೆಲವು ಭಾಗದಲ್ಲಿ ಹಿಂದಿ ಇಲ್ಲ. ಅನೇಕ ರಾಜ್ಯಗಳಲ್ಲಿ ಅವರವರದೇ ಭಾಷೆ ಇದೆ. ತಮ್ಮ ಭಾಷೆಯನ್ನೇ ಮಾತನಾಡುತ್ತಾ ನೆಮ್ಮದಿಯಿಂದ ಇದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಪ್ರಾದೇಶಿಕ ಭಾಷೆಗಳ ಕತ್ತನ್ನು ಹಿಸುಕುವ ಕೇಂದ್ರದ ನಡೆಗೆ ನಮ್ಮ ವಿರೋಧ ಇದೆ. ಕನ್ನಡದ ಬಗ್ಗೆ ಯಾಕಿಷ್ಟು ಅಸಹನೆ ಇವರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ? ಜನ ಈಗಾಗಲೇ ನೆರೆ ಹಾವಳಿ ಯಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಭಾರದೆ ಹಿಂದಿ ಭಾಷೆಯ ವಿಚಾರ ಸರಕಾರಕ್ಕೆ ಮುಖ್ಯವಾಗಿದೆ. ಇದಕ್ಕೆ ಕನ್ನಡಿಗರ ಧಿಕ್ಕಾರವಿದೆ ಎಂದು ಅವರು ಕಿಡಿ ಕಾರಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.