Advertisement
ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನುವುದನ್ನು ಹೇಳಿದ್ದೇನೆ. ಆದರೆ ಕಾಂಗ್ರೆಸ್ ನಾಯಕರ ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನು ಬಳಸಿಕೊಂಡಿದ್ದಾರೆ ಎಂದರು.
ನಾನು ತಾಯಂದಿರ ಬಗ್ಗೆ ಕ್ಷಮೆ ಕೇಳಲು ಆಗದ ರೀತಿ ಅಪಮಾನ ಮಾಡಿದ್ದೇನೆ ಅಂತಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ತರಾತುರಿಯಲ್ಲಿ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾಗಾಂಧಿ ಹತ್ಯೆಯಾದ ಸಮಯದಲ್ಲಿ ದುಃಖ ಪಟ್ಟಿದ್ದು ಬಿಟ್ಟರೆ ಈಗಲೇ ದುಃಖಪಟ್ಟೆ ಅಂತಾ ಅಧ್ಯಕ್ಷರು, ಮಹಿಳೆಯರ ಪರ ಕಂಬ ಮಿಡಿದಿದ್ದಾರೆ. ತಾಯಂದಿರ ಕಣ್ಣೀರು ಈ ವ್ಯಕ್ತಿಗೆ ಈಗ ಕಾಣುತ್ತಿದೆಯಾ? ಕೆಲವು ಹೆಣ್ಣು ಮಕ್ಕಳನ್ನು ಅಪಹರಿಸಿ ಅವರ ಅಪ್ಪ – ಅಮ್ಮನಿಂದ ಜಮೀನು ಬರೆಸಿಕೊಂಡಾಗ ನಿಮಗೆ ದುಃಖ ಆಗಲಿಲ್ಲವೇ? ಇದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕುಟುಕಿದರು.
Related Articles
ಸಿದ್ದರಾಮಯ್ಯ ಅವರೇ, ನಾಯಿ ಹಸಿದಿತ್ತು, ಅನ್ನ ಹಳಸಿತ್ತು ಎನ್ನುತ್ತೀರಿ. 2018ರಲ್ಲಿ ನಮ್ಮ ಮನೆಗೆ ನೀವು ಬಂದಾಗ ನೀವು ನಾಯಿ ಸ್ಥಾನದಲ್ಲಿ ಇದ್ದಿರಾ? ಅಥವಾ ಹಳಸಿದ ಅನ್ನದ ಸ್ಥಾನದಲ್ಲಿ ಇದ್ದಿರಾ? ಅನ್ನಕ್ಕೆ ನಾನಂತೂ ಅಪಮಾನ ಮಾಡುವುದಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Advertisement
ಎಚ್‌ಡಿಕೆ “ಸಂಪತ್ತಿಗೆ’ ಡಿಕೆಶಿ “ಸವಾಲ್’ಬೆಳಗಾವಿ: ಕುಮಾರಸ್ವಾಮಿ ಎಂಥ ಸುಳ್ಳುಗಾರ, ಮೋಸಗಾರ ಎನ್ನುವು ದರ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಚರ್ಚೆಗೆ ಬರಲಿ. ನಿನ್ನ ಹಾಗೂ ನಿನ್ನ ತಮ್ಮನ ಆಸ್ತಿ ಎಷ್ಟು ಎಂಬುದನ್ನು ಚರ್ಚೆ ಮಾಡೋಣ. ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ದಾಖಲೆ ಸಮೇತ ಆ ಬಗ್ಗೆ ಮಾತನಾಡೋಣ ಬಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಮಾರಸ್ವಾಮಿಗೆ ಏಕವಚನದಲ್ಲಿಯೇ ಪಂಥಾಹ್ವಾನ ನೀಡಿದ್ದಾರೆ.