Advertisement

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

11:45 PM Apr 15, 2024 | Team Udayavani |

ಬೆಂಗಳೂರು: ನಾನು ನಾಡಿನ ತಾಯಂದಿರನ್ನು ಅವಮಾನಿಸಿಲ್ಲ. ರಾಜ್ಯದ ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಹೆಸರಿನಲ್ಲಿ ಮಹಿಳೆಯರಿಗೆ 2 ಸಾವಿರ ರೂ. ನೀಡಿ ಅವರ ಗಂಡಂದಿರ ಕೈಯಿಂದ ನಾಲ್ಕೈದು ಸಾವಿರ ರೂ. ವಸೂಲಿ ಮಾಡುತ್ತಿದೆ. ಆದ್ದರಿಂದ ಗ್ಯಾರಂಟಿಗೆ ಮರುಳಾಗಬೇಡಿ ಎಂದು ಹೇಳಿದ್ದೇನೆ. ಆದರೂ ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಜೆಡಿಎಸ್‌ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಹೆಣ್ಣುಮಕ್ಕಳನ್ನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಅಂತ ಹೇಳಿದ್ದೇನೆ. ಗ್ಯಾರಂಟಿ ಕೊಟ್ಟು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ ಅನ್ನುವುದನ್ನು ಹೇಳಿದ್ದೇನೆ. ಆದರೆ ಕಾಂಗ್ರೆಸ್‌ ನಾಯಕರ ಅವರಿಗೆ ಬೇಕಾದಂತೆ ನನ್ನ ಹೇಳಿಕೆಯನ್ನು ಬಳಸಿಕೊಂಡಿದ್ದಾರೆ ಎಂದರು.

ನಿಮಗೆ 2 ಸಾವಿರ ರೂ. ಕೊಟ್ಟು ನಿಮ್ಮ ಯಜಮಾನರ ಜೇಬಿಂದ ಐದು ಸಾವಿರ ಕೀಳುತ್ತಿದ್ದಾರೆ. ಇದರಿಂದ ಎಚ್ಚರವಾಗಿರಿ ಎಂದು ಹೇಳಿದ್ದೇನಷ್ಟೆ. ಕಾಂಗ್ರೆಸ್‌ನವರಿಗೆ ನನ್ನ ಬಗ್ಗೆ ಮಾತಾಡುವುದಕ್ಕೆ ವಿಷಯವಿಲ್ಲ. ಅದಕ್ಕೆ ನನ್ನ ಮೇಲೆ ಈ ರೀತಿ ಮಾತಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.

ಆಸ್ತಿ ಬರೆಸಿಕೊಂಡಾಗ ದುಃಖ ಆಗಿಲ್ಲವೇ?
ನಾನು ತಾಯಂದಿರ ಬಗ್ಗೆ ಕ್ಷಮೆ ಕೇಳಲು ಆಗದ ರೀತಿ ಅಪಮಾನ ಮಾಡಿದ್ದೇನೆ ಅಂತಾ ಕಾಂಗ್ರೆಸ್‌ ಅಧ್ಯಕ್ಷರು, ಶಾಸಕರು ತರಾತುರಿಯಲ್ಲಿ ಝೂಮ್‌ ಮೀಟಿಂಗ್‌ ಮಾಡಿದ್ದಾರೆ. ಇಂದಿರಾಗಾಂಧಿ ಹತ್ಯೆಯಾದ ಸಮಯದಲ್ಲಿ ದುಃಖ ಪಟ್ಟಿದ್ದು ಬಿಟ್ಟರೆ ಈಗಲೇ ದುಃಖಪಟ್ಟೆ ಅಂತಾ ಅಧ್ಯಕ್ಷರು, ಮಹಿಳೆಯರ ಪರ ಕಂಬ ಮಿಡಿದಿದ್ದಾರೆ. ತಾಯಂದಿರ ಕಣ್ಣೀರು ಈ ವ್ಯಕ್ತಿಗೆ ಈಗ ಕಾಣುತ್ತಿದೆಯಾ? ಕೆಲವು ಹೆಣ್ಣು ಮಕ್ಕಳನ್ನು ಅಪಹರಿಸಿ ಅವರ ಅಪ್ಪ – ಅಮ್ಮನಿಂದ ಜಮೀನು ಬರೆಸಿಕೊಂಡಾಗ ನಿಮಗೆ ದುಃಖ ಆಗಲಿಲ್ಲವೇ? ಇದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಕುಟುಕಿದರು.

ಅನ್ನಕ್ಕೆ ನಾನು ಅಪಮಾನ ಮಾಡಲ್ಲ
ಸಿದ್ದರಾಮಯ್ಯ ಅವರೇ, ನಾಯಿ ಹಸಿದಿತ್ತು, ಅನ್ನ ಹಳಸಿತ್ತು ಎನ್ನುತ್ತೀರಿ. 2018ರಲ್ಲಿ ನಮ್ಮ ಮನೆಗೆ ನೀವು ಬಂದಾಗ ನೀವು ನಾಯಿ ಸ್ಥಾನದಲ್ಲಿ ಇದ್ದಿರಾ? ಅಥವಾ ಹಳಸಿದ ಅನ್ನದ ಸ್ಥಾನದಲ್ಲಿ ಇದ್ದಿರಾ? ಅನ್ನಕ್ಕೆ ನಾನಂತೂ ಅಪಮಾನ ಮಾಡುವುದಿಲ್ಲ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Advertisement

ಎಚ್‌ಡಿಕೆ “ಸಂಪತ್ತಿಗೆ’ ಡಿಕೆಶಿ “ಸವಾಲ್‌’
ಬೆಳಗಾವಿ: ಕುಮಾರಸ್ವಾಮಿ ಎಂಥ ಸುಳ್ಳುಗಾರ, ಮೋಸಗಾರ ಎನ್ನುವು ದರ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಚರ್ಚೆಗೆ ಬರಲಿ. ನಿನ್ನ ಹಾಗೂ ನಿನ್ನ ತಮ್ಮನ ಆಸ್ತಿ ಎಷ್ಟು ಎಂಬುದನ್ನು ಚರ್ಚೆ ಮಾಡೋಣ. ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ದಾಖಲೆ ಸಮೇತ ಆ ಬಗ್ಗೆ ಮಾತನಾಡೋಣ ಬಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಮಾರಸ್ವಾಮಿಗೆ ಏಕವಚನದಲ್ಲಿಯೇ ಪಂಥಾಹ್ವಾನ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next