ಮೈಸೂರು: ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ. ಜನತಾ ಜಲಧಾರೆ ಮೂಲಕ ಜೆಡಿಎಸ್ ಅಸ್ತಿತ್ವ ಸಾಬೀತಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ಗುರಿ ತಲುಪುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಎಚ್.ಕೆ.ರಾಮು ಅವರಿಗೆ ಟಿಕೆಟ್ ನೀಡಿದ್ದು ಕುಮಾರಸ್ವಾಮಿ ಅಲ್ಲ. ಪಕ್ಷದ ಕೋರ್ ಕಮಿಟಿ. ಇದು ವೈಯಕ್ತಿಕ ತೀರ್ಮಾನ ಅಲ್ಲ. ಇದು ಆರ್ಥಿಕವಾಗಿಯೂ ನಡೆಯುವ ಚುನಾವಣೆ ಎಂಬುದು ಜಗಜ್ಜಾಹೀರಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಾಸಕ ಮರಿತಿಬ್ಬೇಗೌಡರು ನಮ್ಮ ಪಕ್ಷದಲ್ಲಿ ಇಲ್ಲದಾಗಲೂ ನಾವು ಚುನಾವಣೆ ಗೆದ್ದಿದ್ದೇವೆ. ಇನ್ನು ಹಣ ಇದ್ದವರಿಗಷ್ಟೇ ಟಿಕೆಟ್ ಎನ್ನುವುದಾದರೆ, ಈ ಹಿಂದೆ ಚಿಕ್ಕಮಾದು ಅವರಿಗೆ ಶ್ರೀಮಂತರು ಅಂತ ನಮ್ಮ ಪಕ್ಷದಿಂದ ಟಿಕೆಟ್ ಕೊಟ್ಟಿದ್ದಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಮುಂಬರುವ ಅಸೆಂಬ್ಲಿ ಚುನಾವಣೆಯಲ್ಲಿ ಯಾವುದೇ ರಾಷ್ಟ್ರೀಯ ಪಕ್ಷಗಳಿಗೂ ಬಹುಮತ ಬರುವುದಿಲ್ಲ ಎಂಬುದು ಗೊತ್ತಾಗಿದೆ. ಹೀಗಾಗಿ, ಜೆಡಿಎಸ್ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಅವರಿಗೆ ಸ್ವಂತ ಶಕ್ತಿಯಿಂದ ಗೆಲ್ಲುವ ವಿಶ್ವಾಸವೇ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ : ಕೋವಿಡ್ ಪ್ರಕರಣ : ರಾಜ್ಯದಲ್ಲಿ 109 ಪಾಸಿಟವ್ ವರದಿ, 147ಮಂದಿ ಗುಣಮುಖ