Advertisement

ಮುರುಘಾ ಶರಣರ ಬಂಧನ: ಚರ್ಚೆ ಮಾಡದಿರುವುದೇ ಸೂಕ್ತ:ಎಚ್‌.ಡಿ. ಕುಮಾರಸ್ವಾಮಿ

10:33 PM Sep 02, 2022 | Team Udayavani |

ಬೆಂಗಳೂರು: ಮುರುಘಾಮಠದ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡದಿರುವುದೇ ಸೂಕ್ತ. ಆದರೆ, ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ಪ್ರಕರಣವನ್ನು ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದು ತುಂಬಾ ಸೂಕ್ಷ¾ ವಿಚಾರ. ಮೊದಲೇ ನಮ್ಮ ರಾಜ್ಯ ಭಾವನಾತ್ಮಕ, ಆಚಾರ ವಿಚಾರಗಳಲ್ಲಿ ಬೇಯುತ್ತಿದೆ. ಇಂತಹ ವಿಚಾರಗಳಲ್ಲಿ ನಾವು ಚರ್ಚೆ ಮಾಡದೆ ಇರುವುದೇ ಸೂಕ್ತ. ಸರ್ಕಾರದ ಮಟ್ಟದಲ್ಲಿ ಏನು ತನಿಖೆ ಮಾಡಬೇಕೋ ಮಾಡಲಿ. ತನಿಖೆ ವಿಳಂಬದ ವಿಚಾರ ಸರ್ಕಾರಕ್ಕೆ ಸಂಬಂಧಿಸಿದ್ದು, ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲ್ಲ ಎಂದು ತಿಳಿಸಿದರು.

ಸಚಿವ ಆನಂದ್‌ ಸಿಂಗ್‌ ಬೆದರಿಕೆ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಆತ್ಮಹತ್ಯೆ ಮಾಡಿಕೊಳ್ಳಲು ಹೋದರೆಂದು ಹೇಳಿ ದೂರುದಾರರ ಮೇಲೆ ಎಫ್ಐಆರ್‌ ದಾಖಲಾಗಿದೆಯೆಂದು ಕೇಳಿದ್ದೇನೆ.

ಬೆದರಿಕೆ ಹಾಕಿ, ಹೆದರಿಸಿ, ಪ್ರಾಣ ಬೆದರಿಕೆ ಒಡ್ಡಿದವರನ್ನು ಮಂತ್ರಿ ಎಂದು ಬಿಡಲಾಗಿದೆ. ಇದರಿಂದ ಸರ್ಕಾರದ ಆಡಳಿತ ದುರುಪಯೋಗ ಆಗಿದೆ. ಈ ವಿಚಾರವನ್ನು ತಿಳಿದುಕೊಂಡು ವಿಧಾನಸಭೆ ಕಲಾಪದಲ್ಲಿ ಮಾತನಾಡುತ್ತೇನೆಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next