Advertisement
ಡಿಸಿಎಂ ಹೇಳಿಕೆ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿ.ಕೆ.ಶಿವಕುಮಾರ್ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ, ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಎಂದು ಕಿಡಿಕಾರಿದ್ದಾರೆ.
Related Articles
Advertisement
1983ಕ್ಕೆ ಮೊದಲು ಸ್ಥಿತಿ ಹೇಗಿತ್ತು?
ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ದೇವೇಗೌಡರಿಗೆ ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ. ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್ ರವರೇ..? ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ? ಎಂದು ಅವರು ಕಿಡಿಕಾರಿದ್ದಾರೆ.
ಶ್ರೀಗಳ ಹೆಸರು ಹೇಳುವ ನೈತಿಕತೆ ಇಲ್ಲ
ನಾಡಪ್ರಭು ಕೆಂಪೇಗೌಡರು, ಕೆಂಗಲ್ ಹನುಮಂತಯ್ಯನವರು, ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು, ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ʼರಿಯಲ್ ಎಸ್ಟೇಟ್ ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್? ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ? ಎಂದು ಅವರು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: Mysore ದಸರಾ ಗೆ ರೀ ಲುಕ್ ಕೊಡಬೇಕು… ಸಿಎಂ ಜೊತೆ ಚರ್ಚೆ ಮಾಡುತ್ತೇನೆ: ಡಿಕೆಶಿ