Advertisement

ಪ್ರಧಾನಿ ಮೋದಿ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ? ಎಚ್ ಡಿಕೆ

04:11 PM Mar 14, 2021 | Team Udayavani |

ಬೆಂಗಳೂರು: ಬೆಳಗಾವಿ ಗಡಿ ವಿವಾದದಲ್ಲಿ ಪ್ರಧಾನಿ ಮೋದಿಯವರು ಮಧ್ಯಪ್ರವೇಶ ಮಾಡಬೇಕು ಎಂದು ಡಿಸಿಎಂ ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ. ಪ್ರಧಾನಿ ಮಧ್ಯಸ್ಥಿಕೆ ಮಾಡಿದರೆ ಮಹಾರಾಷ್ಟ್ರ ಬಿಜೆಪಿಯು ಅವರ ಮೇಲೆ ಪ್ರಭಾವ ಬೀರದೇ ಇರದೇ? ಮಧ್ಯಸ್ಥಿಕೆಯಲ್ಲಿ ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರ್ಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಸಾ.ರಾ.ಮಹೇಶ್ ಹೇಳಿದ್ದನೆಲ್ಲಾ ಕೇಳಲು ನಾನು ಕೋಲೆ ಬಸವ ಅಲ್ಲ: ಕುಮಾರಸ್ವಾಮಿ

ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ. ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2ನೇ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ.  ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ ಎಂದಿದ್ದಾರೆ.

Advertisement

ಇದನ್ನೂ ಓದಿ: ಹೆಚ್ಚುತ್ತಿದೆ ಕೋವಿಡ್ ಪ್ರಕರಣಗಳು: ನೈಟ್ ಕರ್ಫ್ಯೂ ಜಾರಿ ಬಗ್ಗೆ ಮಾಹಿತಿ ನೀಡಿದ ಬೊಮ್ಮಾಯಿ

ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ‌ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next