Advertisement

ಕೇರಳದ ರಾಜರಾಜೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹೆಚ್ ಡಿಕೆ

04:08 PM Mar 26, 2022 | Team Udayavani |

ಕಣ್ಣೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ತಳಿಪರಂಬದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು.

Advertisement

ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಅವರು ಬೆಳಗ್ಗೆಯೇ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು.

ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ನಮ್ಮ ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶ್ರೀ ರಾಜರಾಜೇಶ್ವರ ಸ್ವಾಮಿ ಅವರಿಗೆ ಪೂಜೆ ಸಲ್ಲಿಸಿದ್ದರು ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದರು.ಪಕ್ಷದ ಹಿರಿಯ ಮುಖಂಡರು ಹಾಗೂ ಮಾಜಿ ಸಚಿವರಾದ ಬಂಡೆಪ್ಪ ಖಾಷೆಂಪೂರ್ ಅವರು ಇದ್ದರು.

ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಇತರೆ ಸದಸ್ಯರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು. ಸುವಿಶಾಲವಾದ ದೇವಳಕ್ಕೆ ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next