Advertisement

ಕೋವಿಡ್ ಸೋಂಕಿಗೆ ತುತ್ತಾದ ಕುಮಾರಸ್ವಾಮಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ

12:42 PM Apr 17, 2021 | Team Udayavani |

ಬೆಂಗಳೂರು : ಕೋವಿಡ್ ಸೋಂಕು ದೃಢಪಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿಕ್ಸಿತ್ರೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಲು ಇಚ್ಛಿಸಿದ್ದು ಸದ್ಯ ಅಲ್ಲಿ ಅವರಿಗೆ ಬೆಡ್ ಸಿಕ್ಕಿಲ್ಲ ಎನ್ನಲಾಗಿದೆ.

Advertisement

ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗಲಿರುವ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು? ಎಂಬ ಮಾತು ಕೇಳಿ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಶುಕ್ರವಾರ ಸಂಜೆ ದೇಹದಲ್ಲಿ ದಣಿವು ಕಂಡು ಬಂದಿದ್ದು, ಬೆಂಗಳೂರಿಗೆ ವಾಪಾಸ ಆಗಿ ಮನೆಗೆ ಹೋಗದೆ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು.

ಇದನ್ನೂ ಓದಿ :ದಾರಿ ತಪ್ಪಿ ದೆಹಲಿ ತಲುಪಿದ ವೃದ್ಧೆ;ಕರಳು ಬಳ್ಳಿಗೆ ಸೇರಿಸಿದ ಯೋಧ

ಇಂದು ( ಶನಿವಾರ) ಬೆಳಿಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಧೃಢಪಟ್ಟಿದೆ.ಬಳಿಕ ವೈದ್ಯರ ಬಳಿ ಮಾತುಕತೆ ನಡೆಸಿ,ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಅವರು ಹೇಳಿದ್ದಾರಾದರೂ ವೈದ್ಯರು ಅದನ್ನೊಪ್ಪದೆ, ತಕ್ಷಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಲಹೆ ನೀಡಿದ್ದಾರೆ.

Advertisement

ವೈದ್ಯರ ಮಾತಿನಂತೆ ಮಣಿಪಾಲ್ ಆಸ್ಪತ್ರೆ ಸೇರಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ಈ ಮಧ್ಯೆ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿ ಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ ಎನ್ನಲಾಗಿದೆ.

ಇದನ್ನೂ ಓದಿ : ರಾಯಚೂರು:  ಪೊಲೀಸರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಕಿಡಿ

ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನು ಮಾಡಿದ್ದರ ಫಲವಾಗಿ ಬೆಡ್ ಸಿಕ್ಕಿದೆ.ಅದರೆ ಬೆಡ್ ಸಿಕ್ಕರೂ ಅವರು ತಕ್ಷಣ ಅಡ್ಮಿಟ್ ಆಗಲಾಗಿಲ್ಲ.ಬದಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಇಂದು ಅವರು ಹಾಜರಾಗಲೇ ಬೇಕಿದೆ.

ಆದರೆ ಕೋವಿಡ್ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದು ಅಪಾಯ.ಹೀಗಾಗಿ ವಿಡಿಯೋ ಕಾನ್ ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ ಕುಮಾರಸ್ವಾಮಿ,ಈಗ ಕ್ಯಾಮೆರಾ ಮುಂದೆ ಕೂತಿದ್ದಾರೆ. ನ್ಯಾಯಾಲಯದ ವಿಚಾರಣೆ ಮುಗಿದ ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಚ್ ಎಂ ರಮೇಶಗೌಡ ಅವರು ಈ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next