Advertisement

ಭ್ರಷ್ಟಾಚಾರ ನಿಲ್ಲಿಸುತ್ತಾರೆಂಬ ನಂಬಿಕೆ ನನಗಿಲ್ಲ: ಎಚ್‌.ಡಿ.ಕುಮಾರಸ್ವಾಮಿ

09:39 PM Aug 11, 2022 | Team Udayavani |

ಬೆಂಗಳೂರು: ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಹೇಳಿದ್ದಾರೆ.

Advertisement

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು ಎಂದು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಕಾಂಗ್ರೆಸ್‌ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯ್ದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಎಂದು ಹೇಳಿದರು.

ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು  ಮುಖ್ಯಮಂತ್ರಿ ಆಗಿದ್ದಾಗ ಮತ್ತೂಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರ್ಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಏಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ ಎಂದು ದೂರಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next