Advertisement

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಹೇಳಿಕೆ ಪ್ರತಾಪ್ ಸಿಂಹ ವಿರುದ್ಧ ಹೆಚ್.ಡಿಕೆ ಕಿಡಿ

12:04 PM Aug 30, 2022 | Team Udayavani |

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್  ಹೆದ್ದಾರಿ ಕಾಮಗಾರಿ ಅತ್ಯುತ್ತಮವಾಗಿದೆ ಎಂದು ಹೇಳಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ನಿನ್ನೆ ಕಾರು ಚಲಿಸುವಾಗ ಆಲದ ಮರ ಉಳುಳಿಬಿದ್ದು ಸಾವನ್ನಪ್ಪಿದ್ದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಬೆಳಗ್ಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂಚತ್ವನ ಹೇಳಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಉತ್ತಮವಾದ ಕೆಲಸ ಏನಾಗಿದೆ ಎಂಬುದನ್ನು ಪ್ರತಾಪಸಿಂಹ ಬಂದು ನೋಡಲಿ. ಅವರೇ ನಿಂತು ಫೋಟೊ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಸಿಕೊಂಡಿದ್ದರಲ್ಲ, ಅವರೇ ರಸ್ತೆ ನಿರ್ಮಾಣ ಮಾಡಿರುವ ರೀತಿ ಫೋಟೊ ತೆಗೆಸಿಕೊಂಡಿದ್ದರು. ಬಿಡದಿ ಬಳಿ ಬಂದು ಅಧಿಕಾರಿಗಳ ಸಭೆ ಮಾಡಿದ್ದರು. ಇಲ್ಲಿಯೇ ಬಂದು ಮಧ್ಯಸ್ಥಿಕೆ ವಹಿಸಿದ್ದರಲ್ಲ, ಈಗ ಬಂದು ನೋಡಲಿ, ಸಂಗಬಸಪ್ಪನದೊಡ್ಡಿ ಬಳಿ ಬಂದು ಸ್ವಿಮ್ಮಿಂಗ್ ಮಾಡಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ಹರಿಹಾಯ್ದರು.

ಇದನ್ನೂ ಓದಿ: ಗಾಂಧಿ ಕುಟುಂಬದ ಕೈತಪ್ಪಲಿದೆ ಕೈ ಚುಕ್ಕಾಣಿ? ತರೂರ್ ಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಸಾಧ್ಯತೆ

ನಿನ್ನೆ ಅವರೇ ಅವರೇ ಸಂಗಬಸಪ್ಪನದೊಡ್ಡಿ ಹೈವೆಗೆ ಬಂದಿದ್ದರೆ ಸ್ವತಃ ಸ್ವಿಮ್ ಮಾಡಬಹುದಿತ್ತು. ಚೆನ್ನಾಗಿ ನೀರು ನಿಂತಿತ್ತು. ವಾಹನಗಳು ಸಂಚಾರ ಮಾಡಲಿಕ್ಕೆ ರಸ್ತೆ ಮಾಡಿ ಅಂದರೆ ಹೆದ್ದಾರಿಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿದ್ದಾರೆ. ಅವರಿಗೆ ಕಣ್ಣಿದ್ದರೆ ಬಂದು ನೋಡಲಿ ಎಂದು ಕಿಡಿಕಾರಿದರು.

Advertisement

ಕೆರೆ ಒಡೆದಿದ್ದರಿಂದ ಈ ರೀತಿ ಪ್ರವಾಹ ಆಗಿದೆ ಎಂದು ಅವರು ಹೇಳಿದ್ದಾರೆ. ಒಬ್ಬ ಜವಾಬ್ದಾರಿಯುತ ವ್ಯಕ್ತಿ ಹೀಗೆ ಮಾತನಾಡುವುದಲ್ಲ. ಶಾಶ್ವತವಾದ ಕೆಲಸ ಆಗಬೇಕು. ಸರ್ಟಿಫಿಕೇಟ್ ಕೊಡೋದಕ್ಕಲ್ಲ ಇವರು ಇರುವುದು. ಕಾಮಗಾರಿ ತಪ್ಪಾಗಿದ್ದರೆ ಸರಿಪಡಿಸಬೇಕು. ಪ್ರತಾಪ್ ಸಿಂಹ ಬರೀ ಪ್ರಚಾರ ತೆಗೆದುಕೊಳ್ಳೋದು ನಿಲ್ಲಿಸಲಿ. ಮೊದಲು ಜನರ ಕೆಲಸ ಮಾಡಲಿ ಎಂದು ಅವರು ಟಾಂಗ್ ಕೊಟ್ಟರು.

ಮಾಗಡಿ ಶಾಸಕ ಮಂಜುನಾಥ್ ಅವರು, ಮತ್ತಿತರರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

ಕಾರಿನ ಮೇಲೆ ಆಲದಮರ ಬಿದ್ದು ಅಸುನೀಗಿದ ಬೋರೇಗೌಡರ ಮನೆಗೆ ಭೇಟಿ:

ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರ ಉರುಳಿಬಿದ್ದು ದುರ್ಮರಣಕ್ಕೀಡಾದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಬೆಳಗ್ಗೆಯೇ ಮಾಗಡಿ ಶಾಸಕ ಮಂಜುನಾಥ್‌ ಅವರೊಂದಿಗೆ ಬೋರೇಗೌಡರ ನಿವಾಸಕ್ಕೆ ಧಾವಿಸಿದ ಮಾಜಿ ಮುಖ್ಯಮಂತ್ರಿಗಳು; ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರಲ್ಲದೆ, ಅವರಿಗೆ 5 ಲಕ್ಷ ರೂಪಾಯಿಯ ನೆರವಿನ ಚೆಕ್‌ ಹಸ್ತಾಂತರ ಮಾಡಿದರು.

ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮನೆಯವರಿಗೆ ಧೈರ್ಯ ತುಂಬಿದ ಅವರು, ಕುಟುಂಬದ ಸ್ಥಿತಿಗತಿಗಳನ್ನು ಕೇಳಿ ತಿಳಿದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next