ದೇವನಹಳ್ಳಿ: ಗುಜರಾತ್ ಚುನಾವಣೆ ಫಲಿತಾಂಶ 2023ರ ವಿಧಾನಸಭಾ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಗುಜರಾತ್ ಫಲಿತಾಂಶ ನಿರೀಕ್ಷಿತವಾಗಿತ್ತು. ಕಳೆದ 5 ವರ್ಷಗಳಿಂದ ಅಲ್ಲಿ ವಿರೋಧ ಪಕ್ಷವೇ ಇರಲಿಲ್ಲ. ರಾಜ್ಯದಲ್ಲಿ ಗುಜರಾತ್ ಮಾದರಿಯ ಫಲಿತಾಂಶ ಕಾಣುತ್ತಿರುವ ಬಿಜೆಪಿಗೆ ಜನರು ಮಾರು ಹೋಗುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕರ್ಮಕಾಂಡಗಳಿಂದ ಜನಬೇಸತ್ತಿದ್ದಾರೆ. 2023ರ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ. ಬಿಜೆಪಿ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಜನ ಬದಲಾವಣೆ ಬಯಸುತ್ತಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಒಂದು ಬಾರಿ, ಕಾಂಗ್ರೆಸ್ ಒಂದು ಬಾರಿ ಅಧಿಕಾರಕ್ಕೆ ಬರುತ್ತದೆ. ಮುಖ್ಯಮಂತ್ರಿ ಹೇಳಿಕೆ ಗಮನಿಸುತ್ತಿದ್ದೇನೆ. ಅಂತಹ ಪ್ರಭಾವ ಬೀರುವುದಿಲ್ಲ ಎಂದು ಹೇಳಿದರು.