Advertisement
ನಗರದ ಸಿದ್ಧಗಂಗಾ ಮಠಕ್ಕೆ ಪಂಚರತ್ನ ರಥಯಾತ್ರೆ ಆಗಮಿಸಿದ ಸಂದರ್ಭದಲ್ಲಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ರಾಜ್ಯದ ಜನತೆ ಜೆಡಿಎಸ್‌ಗೆ ಬಹುಮತ ನೀಡುವ ತೀರ್ಮಾನ ಮಾಡಿದ್ದಾರೆ. ರಾಜಕೀಯ ಗಾಳಿ ಗಂಧ ಗೊತ್ತಿಲ್ಲದವರೂ ಸಹ ಕುಮಾರಣ್ಣ ಸಿಎಂ ಆಗಬೇಕು ಎಂಬ ಮಾತುಗಳನ್ನಾಡುತ್ತಿದ್ದಾರೆ ಎಂದರು.
Related Articles
Advertisement
ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿಂದ ನಾನು ಕೂಡ ಪ್ರಚಾರಕ್ಕೆ ಹೋಗುತ್ತೇನೆಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ತಮ್ಮ ಪತ್ನಿ ಜತೆ ಗುರುವಾರ ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಕ್ಕೆ ತೆರಳಲು ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿ ದಿನ ಪಟ್ಟಿ ಬದಲಾವಣೆ ಆಗುತ್ತದೆ. ಪ್ರತಿ ದಿನ ಸಮೀಕ್ಷೆಯೂ ನಡೆಯುತ್ತಿದೆ. ಅದನ್ನು ಆಧರಿಸಿ ನಿರ್ಧಾರ ಆಗುತ್ತದೆ. ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡರು ಕುಮಾರಸ್ವಾಮಿ ಜತೆ ಮಾತನಾಡಿದ್ದಾರೆ. ದ್ವಂದ್ವ ಇದೆ ಇನ್ನೂ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರತಿಕ್ರಿಯಿಸಿದರು.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ. ಇದರಿಂದ ಬಿಜೆಪಿಗೆ ಲಾಭ ನಷ್ಟದ ಪ್ರಶ್ನೆ ಯಲ್ಲ. ಇದನ್ನು ಜಾರಿ ಮಾಡಲು ಹೊರಟರೆ ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ. ನಮ್ಮ ಸಂವಿಧಾನದಲ್ಲಿ ಏನಿದೆಯೋ ಅದಕ್ಕೆ ನಾವು ಬದ್ಧರಾಗಿಬೇಕು. ಹಾಗಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನನ್ನ ವಿರೋಧವಿದೆ.-ಎಚ್.ಡಿ. ದೇವೇ ಗೌಡ, ಮಾಜಿ ಪ್ರಧಾನಿ