Advertisement
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು,ರಾಜ್ಯ ಸರಕಾರದ ಮೇಲೆ ಅನೇಕ ಆರೋಪಗಳಿವೆ. ನಾನು ಸ್ವತಃ ಬಿಎಂಎಸ್ ಶಿಕ್ಷಣ ಟ್ರಸ್ಟ್ ನಲ್ಲಿ ನಡೆದಿರುವ ಅಕ್ರಮ ಬಗ್ಗೆ ಸದನದಲ್ಲಿಯೇ ದಾಖಲೆಗಳ ಸಮೇತ ಮಾಹಿತಿ ನೀಡಿದ್ದೆ. ಇದಲ್ಲದೆ, ಅನೇಕ ಹಗರಣ, ಅಕ್ರಮಗಳ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಒಂದು ವೇಳೆ ಪಿಎಫ್ಐ ಮೇಲೆ ನಡೆದಿರುವ ದಾಳಿ ಕುರಿತು ನೈಜ ಮಾಹಿತಿ ಕೊಡದಿದ್ದರೆ, ಆರೋಪ ಮತ್ತು ಹಗರಣಗಳ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಈ ದಾಳಿ ನಡೆಸಲಾಗಿದೆ ಎಂದು ಭಾವಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.
Related Articles
Advertisement
ಏಕಾಏಕಿ ಈ ಬೆಳವಣಿಗೆಯಿಂದ ರಾಜ್ಯದಲ್ಲಿ ಯಾವುದೇ ಸಮಾಜದ ಮೇಲೆ ಅತಂಕ, ಭಯ ಸೃಷ್ಟಿ ಆಗಬಾರದು. ಇತ್ತೀಚೆಗೆ ಅನೇಕ ಸಂಘಟನೆಗಳು ತಮ್ಮ ಅಜೆಂಡಾ ಪೂರೈಸಲು ಕೆಲಸ ಮಾಡುತ್ತಿವೆ. ಅವುಗಳಿಗೆ ಅರ್ಥಿಕ ಶಕ್ತಿ ಹೇಗೆ ಬರ್ತಿದೆ? ಕೆಲ ಘಟನೆಗಳ ಹಿಂದೆ ಯಾವ ಸಂಘಟನೆಗಳಿವೆ ಎನ್ನುವುದನ್ನು ತನಿಖೆಯಿಂದ ಹೊರಬರಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.
ಕಳೆದ ರಾತ್ರಿ ಏಕಾಏಕಿ ದಾಳಿ ಆಗಿರೋದು ಸಣ್ಣ ಪುಟ್ಟ ಕಾರ್ಯಕರ್ತರಿಗೆ ಆತಂಕ ಉಂಟು ಮಾಡಿದೆ ಎನ್ನುವುದು ನಿಜ. ಈ ದಾಳಿಯ ವೇಳೆ ಏನು ಸಿಕ್ಕಿದೆ. ಯಾವ ದಾಖಲೆ ಇದೆ ಎಂಬುದನ್ನು ಜನರ ಮುಂದೆ ಇಡಬೇಕು. ದಾಳಿಯ ಬಗ್ಗೆ ಸತ್ಯ ಹೇಳದೇ ಹೋದರೆ ಕಾಂಗ್ರೆಸ್ ನ ಪೇ ಸಿಎಂ ಅಭಿಯಾನ ಡೈವರ್ಟ್ ಮಾಡೋಕೆ ಸರಕಾರ ಹೀಗೆ ಮಾಡಿದೆ ಎಂಬ ಅನುಮಾನ ಜನರಿಗೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದರು.
ನಿಜವಾಗಿಯೂ ಸಮಾಜಘಾತುಕ ಶಕ್ತಿ ಬಗ್ಗೆ ಮಾಹಿತಿ ಇದ್ದರೆ ಜನರ ಮುಂದೆ ಇಡಬೇಕು. ನೆಪಗಳನ್ನು ಹೇಳಿ ಸರಕಾರ ನುಣುಚಿಕೊಳ್ಳಬಾರದು. ವಾಸ್ತವ ಅಂಶಗಳನ್ನು ಜನರ ಮುಂದೆ ಸರಕಾರ ಇಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಇದನ್ನೂ ಓದಿ: ಆಲಿಯಾ ಪಕ್ಕದಲ್ಲಿ ಮಲಗುವಾಗ ನಿಜಕ್ಕೂ ಕಷ್ಟವಾಗುತ್ತದೆ..! ತನ್ನ ಕಷ್ಟ ಹೇಳಿದ ಪತಿ ರಣ್ಬೀರ್
ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ ಯಾರು ಯಾರನ್ನು ಬಂಧನ ಮಾಡಿದ್ದಾರೆ. ಅವರ ಸಮಾಜಘಾತುಕ ಕೆಲಸ ಏನು? ಎಂಬುದನ್ನು ಅಂತ ಸರಕಾರ ಜನರ ಮುಂದೆ ಇಡದೇ ಹೋದರೆ, ಸರಕಾರವೇ ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಮಾಜಿ ಶಾಸಕರಾದ ಹೆಚ್.ಎಂ.ರಮೇಶ್ ಗೌಡ, ಶಾರದಾ ಪೂರ್ಯ ನಾಯಕ್, ತಿಮ್ಮರಾಯಪ್ಪ ಹಾಗೂ ಹಿರಿಯ ಮುಖಂಡ ಹರಿಹರದ ಶಿವಶಂಕರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.