Advertisement
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಆಮ್ಲಜನಕ ಪೊರೈಕೆಯ ವಿಷಯದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ಧೋರಣೆ ಬಗ್ಗೆ ಧ್ವನಿ ಎತ್ತಿದ್ದಾರೆ.
Related Articles
Advertisement
ಅನುದಾನದಲ್ಲಿ ತಾರತಮ್ಯ, ಜಿಎಸ್‌ಟಿ ಬಾಕಿಯಲ್ಲಿ ತಾರತಮ್ಯ, ನೆರೆ-ಬರ ಪರಿಹಾರದಲ್ಲಿ ಮಾಡಲಾದ ತಾರತಮ್ಯವನ್ನು ಕರ್ನಾಟಕ, ಕನ್ನಡಿಗರು ಹೇಗೋ ಸಹಿಸಿದ್ದಾರೆ. ಆದರೆ, ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಈ ಮಾರಕ ತಾರತಮ್ಯವನ್ನು ಸಹಿಸುವುದಾದರೂ ಹೇಗೆ. ಇದು ಕನ್ನಡಿಗರ ಜೀವ, ಜೀವನದ ಪ್ರಶ್ನೆ ಎಂಬುದನ್ನು ಕೇಂದ್ರ ಸರ್ಕಾರ ಅರಿಯುತ್ತಿಲ್ಲ ಏಕೆ? ಎಂದು ಕೇಂದ್ರದ ವಿರುದ್ಧ ಗುಡುಗಿದ್ದಾರೆ.
ಅಷ್ಟಕ್ಕೂ ನಾವು ಅಧಿಕವಾಗಿ ಏನೂ ಕೇಳುತ್ತಿಲ್ಲ. ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ನಮಗೇ ನೀಡಿ ಎಂಬುದು ನಮ್ಮ ಬೇಡಿಕೆ. ನಮ್ಮವರ ಜೀವವನ್ನೇ ಕಿತ್ತು ಗುಜರಾತ್ ಮತ್ತಿತರ ರಾಜ್ಯಗಳ ಜನರ ಜೀವ ಉಳಿಸಬೇಕಾದ ಅನಿವಾರ್ಯತೆ, ತ್ಯಾಗ ಮಾಡಬೇಕಾದ ಸಂದಿಗ್ಧತೆಯಲ್ಲಿ ನಮ್ಮನ್ನು ಸಿಲುಕಿಸಬಾರದು. ಕೇಂದ್ರ ನಮ್ಮ ಪಾಲನ್ನು ನಮಗೆ ನೀಡಲಿ ಎಂದು ಕೇಳಿಕೊಂಡಿದ್ದಾರೆ.
ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದ ಇಂಥ ತಾರತಮ್ಯವನ್ನು ಪ್ರಶ್ನಿಸಬೇಕು. ಇಲ್ಲಿವರೆಗೆ ಬಾಯಿಗೆ ಬೀಗ ಹಾಕಿಕೊಂಡಿರುವ ಬಿಜೆಪಿ ಸಂಸದರು ಈಗ ಜನರ ಜೀವ ಉಳಿಸುವುದಕ್ಕಾದರೂ ಬಾಯಿ ಬಿಡಲಿ. ರಾಜ್ಯದಿಂದ ಶಕ್ತಿ ಪಡೆದಿರುವ ಕೇಂದ್ರ ಅದೇ ಶಕ್ತಿಯನ್ನು ಬಳಸಿಕೊಂಡು ರಾಜ್ಯದ ಮೇಲೆ ಗದಾಪ್ರಹಾರ ನಡೆಸುತ್ತಿರುವುದನ್ನು ಜನ ಗಮನಿಸಲಿ ಎಂದಿದ್ದಾರೆ.