Advertisement
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿ ಬಿಜೆಪಿ ಹಾಗೂ ಕುಟುಂಬ ರಾಜಕಾರಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related Articles
Advertisement
ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!! ಎಂದು ವ್ಯಂಗ್ಯವಾಡಿದ್ದಾರೆ.
ʼಮಿಷನ್ ದಕ್ಷಿಣ್ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ ಎಂದು ಹೇಳಿದ್ದಾರೆ.
ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ;
1.ಯಡಿಯೂರಪ್ಪ & ಸನ್ಸ್
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್
7.ಜಗದೀಶ ಶೆಟ್ಟರ್-ಪ್ರದೀಪ್ ಶೆಟ್ಟರ್
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್
ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ? ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು ಎಂದಿದ್ದಾರೆ.