Advertisement
ಹಾಸನ ಲೋಕಸಭಾ ಕ್ಷೇತ್ರದ ಮತ ಎಣಿಕೆ ಏಜೆಂಟರ ಗುರುತಿನ ಕಾರ್ಡ್‌ಗಳಿಗೆ ದೇಗುಲಗಳಲ್ಲಿ ಪೂಜೆ ಸಲ್ಲಿಸಿದ್ದಲ್ಲದೆ, ಮತ ಎಣಿಕೆ ಕೇಂದ್ರದ ಏಜೆಂಟರ ಸಭೆ ನಡೆಸಿ ಎಣಿಕೆ ಕೇಂದ್ರದಲ್ಲಿ ಕಟ್ಟೆಚ್ಚರದಿಂದ ಇರಬೇಕೆಂದು ಸೂಚಿಸಿದರು. ಪುತ್ರ ಪ್ರಜ್ವಲ್ ಎಸ್‌ಐಟಿ ಕಸ್ಟಡಿಯಲ್ಲಿದ್ದು, ಪತ್ನಿ ಭವಾನಿ ಅವರೂ ಎಸ್‌ಐಟಿಯಿಂದ ಬಂಧನದ ಭೀತಿಯಲ್ಲಿರುವುದರ ನಡುವೆ ರವಿವಾರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅನಂತರ ಹಾಸನ ಲೋಕಸಭಾ ಕ್ಷೇತ್ರದ ಮತಗಳ ಎಣಿಕೆ ಏಜೆಂಟರ ಸಭೆ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಿದ್ಧತೆಯ ಬಗ್ಗೆಯೂ ಪಕ್ಷದ ಮುಖಂಡರ ಸಭೆ ನಡೆಸಿದರು.
ಹಾಸನ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು ಹಾಗೂ ಅಪಹರಣ ಆರೋಪದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಜಾಮೀನು ಪಡೆದಿರುವುದರ ವಿರುದ್ಧ ಎಸ್‌ಐಟಿ ಮೇಲ್ಮನವಿ ಸಲ್ಲಿಸಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಯಲ ರೇವಣ್ಣಗೆ ನೀಡಿರುವ ಜಾಮೀನನ್ನು ರದ್ದುಪಡಿಸಬೇಕೆಂದು ಎಸ್‌ಐಟಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ.