ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡಕ್ಕೆ ದಿನಕ್ಕೊಂದು ತಿರುವ ಲಭಿಸುತ್ತಿದ್ದು, ಮಾಜಿ ಸಚಿವ ಎಚ್.ಡಿ.ರೇವಣ್ಣ ಈಗ ಸಿದ್ದರಾಮಯ್ಯ ಮನವೊಲಿಕೆಗೆ ಮುಂದಾಗಿದ್ದಾರೆ.
ಪಕ್ಷದ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿಯವರ ಜತೆಗೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಲು ರೇವಣ್ಣ ನಿರ್ಧರಿಸಿದ್ದಾರೆ. ಆದರೆ ಈ ಭೇಟಿಯಿಂದ ಮಹತ್ವದ ತೀರ್ಮಾನ ಹೊರ ಬೀಳುವ ಸಾಧ್ಯತೆ ಕಡಿಮೆ.
ಇದನ್ನೂ ಓದಿ: ಪಠ್ಯ ವಾಪಾಸ್ ಹೆಸರಿನಲ್ಲಿ ಪ್ರಚಾರ ಪಡೆಯುತ್ತಿರುವವರು ವಿಚಾರಹೀನರು: ಪ್ರತಾಪ್ ಸಿಂಹ
ಒಂದೆಡೆ ರೇವಣ್ಣ ಸಿದ್ದರಾಮಯ್ಯ ಮನವೊಲಿಕೆಗೆ ಮುಂದಾದರೆ ಮಾಜಿ ಸಿಎಂ ಕುಮಾರಸ್ವಾಮಿ ಮಾತ್ರ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಸಿಂಗಾಪುರಕ್ಕೆ ತೆರಳಿರುವ ಕುಮಾರಸ್ವಾಮಿ ರಾಜ್ಯಸಭಾ ಚುನಾವಣೆ ಬಗ್ಗೆ ತಲೆ ಬಿಸಿ ಮಾಡಿಕೊಂಡಿಲ್ಲ.
ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ನೀಡುವ ಸಂದರ್ಭದಲ್ಲಿ ಜೆಡಿಎಸ್ ಕಾಂಗ್ರೆಸ್ ಗೆ ನೀಡಿದ ಭರವಸೆಯನ್ನು ಈಗ ನೆನಪಿಸಿಕೊಳ್ಳಲಿ ಎಂಬುದು ಕಾಂಗ್ರೆಸ್ ವಾದವಾಗಿದೆ.