ಆದರೆ ತನಿಖೆಗೆ ಅಸಹಕಾರ ತೋರುತ್ತಿರುವ ರೇವಣ್ಣ ಎರಡು ಪ್ರಕರಣಗಳಲ್ಲೂ ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಿಸಿದ್ದಾರೆ.ನಾಲ್ಕು ದಿನಗಳ ಕಾಲ ರೇವಣ್ಣನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ.
Advertisement
ಅಧಿಕಾರಿಗಳ ವಿಚಾರಣೆಗೆ ರೇವಣ್ಣ ಸಹಕರಿಸುತ್ತಿಲ್ಲ. ಯಾವುದೇ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ.
Related Articles
ನ್ಯಾಯಾಲಯವು ಆರೋಪಿ ರೇವಣ್ಣನಿಗೆ ಪ್ರತಿ ದಿನ ಒಂದು ತಾಸು ತಮ್ಮ ವಕೀಲರ ಜತೆ ಮಾತನಾಡಲು ಅವಕಾಶ ನೀಡಿದೆ. ಹೀಗಾಗಿ ಸೋಮವಾರ ಬೆಳಗ್ಗೆ 9.30ಕ್ಕೆ ಸಿಐಡಿ ಕಚೇರಿಗೆ ಬಂದಿದ್ದ ವಕೀಲರ ಜತೆಗೆ ರೇವಣ್ಣ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ. ಸೋಮವಾರ ರೇವಣ್ಣ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಅರ್ಜಿ ಜಾಮೀನಿಗೆ ಅರ್ಹವೇ ಎಂಬುದರ ಬಗ್ಗೆಗಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿತು.