Advertisement

ಜೆಡಿಎಸ್‌ ಶಾಸಕರ ಕ್ಷೇತ್ರಕ್ಕೆ ಅನುದಾನ ನೀಡದೆ ಪಕ್ಷಪಾತ

02:16 PM Mar 13, 2021 | Team Udayavani |

ಹಾಸನ: ಜೆಡಿಎಸ್‌ – ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾಗಿರುವ ಯೋಜನೆಗಳಿಗೆ ಅನುದಾನ ನೀಡುವಂತೆ ಒತ್ತಾಯಿಸಿ ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಲಾಗುವುದು ಎಂದು ಜೆಡಿಎಸ್‌ ಮುಖಂಡ, ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ತಿಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಆಡಳಿತಾತ್ಮಕ ಮಂಜೂರಾಗಿರುವ ಯೋಜನೆಗಳ ಕಾಮಗಾರಿಗೆಅನುದಾನ ನೀಡುವಂತೆ ಮುಖ್ಯಮಂತ್ರಿಯವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನು ದಾನ ಬಿಡುಗಡೆಯಾಗುತ್ತಿದೆ ಎಂದು ದೂರಿದರು.

ಸಮ್ಮಿಶ್ರ ಸರ್ಕಾರದಲ್ಲಿ ಕಾಮಗಾರಿಗಳಿಗೆ ಮಂಜೂರಾಗಿದ್ದ ಅನುದಾನವನ್ನು ಬಿಜೆಪಿ ಶಾಸಕರ ಕ್ಷೇತ್ರಗಳು ಹಾಗೂ ಉಪ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ವರ್ಗಾಯಿಸಲಾಗುತ್ತಿದೆ. ಬಿಜೆಪಿ ಸರ್ಕಾರಅಧಿಕಾರಕ್ಕೆ ಬಂದಾಗಿನಿಂದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳನ್ನುಕಡೆಗಣಿಸಿದೆ. ಅನುದಾನ ಹಂಚಿಕೆಯಲ್ಲಿತಾರತಮ್ಯ ಮಾಡಲಾಗುತ್ತಿದೆ. ನೀರಾವರಿ ಇಲಾಖೆಯಲ್ಲಿ ಶೇ.10 ಕಮೀಷನ್‌ ನೀಡಿದರೆ ಮಾತ್ರ ಗುತ್ತಿಗೆದಾರರಿಗೆ ಬಿಲ್‌ ಮಂಜೂರುಮಾಡಲಾಗುತ್ತಿದೆ ಎಂದು ಆರೋಪಿಸಿದರು. ಅನುದಾನ ಬಿಡುಗಡೆಯಲ್ಲಿ ಬಿಜೆಪಿ ಸರ್ಕಾರ ಪಕ್ಷಪಾತ ಮಾಡುತ್ತಿರುವ ಬಗ್ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರೊಂದಿಗೂಶಾಸಕರು ಚರ್ಚೆ ನಡೆಸಿದ್ದು, ವಿಧಾನಸಭಾಧ್ಯಕ್ಷರಿಗೂ ತಿಳಿಸಲಾಗಿದೆ ಎಂದು ಹೇಳಿದರು.

ಯಾವ ನ್ಯಾಯ?: ಜೆಡಿಎಸ್‌ ಶಾಸಕರು ಹೊಸ ಯೋಜನೆಗಳಿಗೆ ಅನುದಾನ ನೀಡುವಂತೆ ಕೇಳುತ್ತಿಲ್ಲ. ಹಿಂದಿನ ಸರ್ಕಾರದಲ್ಲಿ ಮಂಜೂರಾದ ಅಭಿವೃದ್ಧಿ ಯೋಜನೆಗಳನ್ನು ಮುಂದುವರಿಸಬೇಕು ಹಾಗೂ ಅನುದಾನ ನೀಡಬೇಕು ಎಂದು ಮನವಿ ಮಾಡುತ್ತಿದ್ದೇವೆ. ಕಳೆದಒಂದು ವರ್ಷದಿಂದಲೂ ಮುಖ್ಯಮಂತ್ರಿಯವರ ಗಮನ ಸೆಳೆದರೂ ಜೆಡಿಎಸ್‌ ಶಾಸಕರ ಮನವಿಗೆಸ್ಪಂದಿಸಿಲ್ಲ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದಒಂದೂವರೆ ವರ್ಷದಿಂದ ತಾಳ್ಮೆಯಿಂದಸಹಿಸಿಕೊಂಡಿದ್ದೆವು. ಒಂದು ಪಕ್ಷದ ಸದಸ್ಯರಿಗೆ ಮಾತ್ರಸರ್ಕಾರದ ಅನುದಾನ ನೀಡುವುದು, ಯಾವನ್ಯಾಯ?ಎಲ್ಲಾ ಕ್ಷೇತ್ರಗಳ ಹಿತ ಕಾಪಾಡುವುದು ಮುಖ್ಯಮಂತ್ರಿಯವರ ಕರ್ತವ್ಯವಲ್ಲವೇ ಎಂದು ಪ್ರಶ್ನಿಸಿದರು.

ಸ್ಪೀಕರ್‌ಗೆ ಮನವಿ: ಸದನ ಒಳಗೆ ಮತ್ತು ಹೊರಗೆ ಹೋರಾಟ ಮಾಡಿ ನಮ್ಮ ಕ್ಷೇತ್ರಗಳ ಅಭಿವೃದ್ಧಿಯಾಗು ವಂತೆ ನಾವು ನೋಡಿಕೊಳ್ಳಬೇಕಾಗಿದೆ ಎಂದ ರೇವಣ್ಣಅವರು, ಜೆಡಿಎಸ್‌ನ ಎಲ್ಲ ಶಾಸಕರೂ ಧರಣಿಯಲ್ಲಿ ಭಾಗವಹಿಸುವರು ಎಂದರು. ಶಾಸಕರಿಗೆಅನ್ಯಾಯವಾದಾಗ ರಕ್ಷಣೆ ಬರುವುದು ವಿಧಾನಸಭಾ ಅಧ್ಯಕ್ಷರ ಕರ್ತವ್ಯ. ಅವರು ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸಬಾರದು. ಬಿಜೆಪಿ ಸರ್ಕಾರದಲ್ಲಿ ಯಾವ ಜಿಲ್ಲೆಗೆ ಎಷ್ಟು ಅನುದಾನ ಬಿಡುಗಡೆ ನೀಡಲಾಗಿದೆ ಎಂಬುದರ ಬಗ್ಗೆ ಶ್ವೇತವನ್ನು ಪತ್ರಹೊರಡಿಸಲಿ. ಈ ಬಗ್ಗೆ ಸ್ಪೀಕರ್‌ ಸರ್ಕಾರಕ್ಕೆ ಸೂಚನೆ ನೀಡಿಲಿ ಎಂದೂ ಒತ್ತಾಯಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next