Advertisement
ಹಾಸನ ಡೇರಿ ಆವರಣದಲ್ಲಿ ಹಾಸನ ಹಾಲು ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಪಿಎಂಜಿಎಸ್‌ವೈ, ಕೇಂದ್ರ ರಸ್ತೆ ಅಭಿವೃದ್ಧಿ ನಿಧಿ ಯಿಂದ ಜಿಲ್ಲೆಗೆ ಮಂಜೂ ರಾಗಿರುವ ಕಾಮಗಾರಿ ಮತ್ತು ಮೊತ್ತದ ಬಗ್ಗೆ ದಾಖಲೆ ಸಹಿತ ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡಲಿದ್ದೇವೆ ಎಂದರು.
Related Articles
Advertisement
ಜಿಲ್ಲೆಯಲ್ಲಿ 250 ಕಿ.ಮೀ. ರಸ್ತೆ ಅಭಿವೃದ್ಧಿಗೆ 200 ಕೋಟಿ ರೂ. ಮಂಜೂ ರಾಗಿದೆ ಎಂದು ಕೇಂದ್ರ ಸರ್ಕಾರ ದಿಂದ ಜಿಲ್ಲೆಗೆ ಮಂಜೂರಾದ ಯೋಜನೆಗಳ ಬಗ್ಗೆ ಎಚ್.ಡಿ.ರೇವಣ್ಣ ಮಾಹಿತಿ ನೀಡಿದರು.
ಶಾಂತಿಗ್ರಾಮ- ಅರಸೀಕೆರೆ- ಹಿರಿ ಯೂರು ನಡುವೆ 1,550 ಕೋಟಿ ರೂ. ಹೊಸ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದು, ಭೂ ಸ್ವಾಧೀನ ಪ್ರಕ್ರಿಯೆ ನಡೆದಿದೆ. ಮಾರ್ಚ್‌ನಿಂದ ಕಾಮಗಾರಿ ಕಾಮ ಗಾರಿ ಆರಂಭವಾಗಲಿದೆ ಎಂದು ಹೇಳಿದರು.
ಹೊಸದಾಗಿ 12 ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ :
ಹಾಸನ-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಗ್ರಾಮಗಳ ಸಂಪರ್ಕಕ್ಕೆ ಪೂರಕವಾಗಿ ಚನ್ನರಾಯಪಟ್ಟಣ ಮತ್ತು ಹಾಸನ ತಾಲೂಕು ವ್ಯಾಪ್ತಿಯಲ್ಲಿ ಮತ್ತೆ ಹೊಸದಾಗಿ 12 ಮೇಲ್ಸೇತುವೆಗಳ ನಿರ್ಮಾಣಕ್ಕೆ 428 ಕೋಟಿ ರೂ. ಯೋಜನೆ ಎನ್‌ಎಚ್‌ಎಐನಿಂದ ಪ್ರಸ್ತಾವನೆ ಸಿದ್ಧಗೊಂಡಿದ್ದು, ಶೀಘ್ರದಲ್ಲಿಯೇ ಮಂಜೂರಾತಿ ಸಿಗಲಿದೆ. ಈ ಎಲ್ಲ ಯೋಜನೆಗಳು ಹಾಸನ ಜಿಲ್ಲೆಗೆ ಮಂಜೂರಾಗಿರುವುದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತುಸಂಸದ ಪ್ರಜ್ವಲ್ ರೇವಣ್ಣ ಅವರ ಹೋರಾಟದಿಂದ ಎಂದು ರೇವಣ್ಣ ತಿಳಿಸಿದರು.
333 ಮಕ್ಕಳಿಗೆ 18.5 ಲಕ್ಷ ರೂ. ಪುರಸ್ಕಾರ :
ಹಾಲು ಉತ್ಪಾದಕರ ಮಕ್ಕಳಿಗೆ ಉತ್ತೇಜನ ನೀಡುವ ಸಲುವಾಗಿ ಒಟ್ಟು 333 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಾರಿ ಹಾಸನ ಹಾಲು ಒಕ್ಕೂಟವು ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 5 ಸಾವಿರ, ಪಿಯುಸಿ 7 ಸಾವಿರ ಹಾಗೂ ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ.ಪುರಸ್ಕಾರ ನೀಡಲಾಗುತ್ತಿದೆ ಎಂದು ಎಚ್.ಡಿ.ರೇವಣ್ಣ ಅವರು ಹೇಳಿದರು. ಹಾಸನ ಹಾಲು ಒಕ್ಕೂಟವು ಹಾಸನ ಡೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಹಾಲು ಉತ್ಪಾದಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿ ಮಾತನಾಡಿ, ಮುಂದಿನ ವರ್ಷದಿಂದ ಪ್ರತಿಭಾ ಪುರಸ್ಕಾರದ ವಿದ್ಯಾರ್ಥಿಗಳ ಸಂಖ್ಯೆ ಮತ್ತು. ಮೊತ್ತವನ್ನು ದುಪ್ಪಟ್ಟು ಮಾಡಲಾ ಗುವುದು ಎಂದು ರೇವಣ್ಣ ಅವರು ಸ್ಪಷ್ಟಪಡಿಸಿದರು. ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ಅವರು ಮಾತನಾಡಿ, ಹಾಸನ ಜಿಲ್ಲೆ ಶೈಕ್ಷಣಿಕವಾಗಿ ಅಭಿವೃದ್ಧಿ ಆಗಿರುವುದರ ಹಿಂದೆ ಎಚ್.ಡಿ.ರೇವಣ್ಣ ಅವರ ಶ್ರಮ ಮತ್ತು ಪ್ರೋತ್ಸಾಹವಿದೆ ಎಂದರು.
ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ನಿರ್ದೇಶಕರಾದ ಮಂಜೇಗೌಡ, ಚನ್ನೇಗೌಡ , ಸಹಕಾರ ಸಂಘಗಳ ಉಪ ನಿಬಂಧಕ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಒಕ್ಕೂಟದ ನಿರ್ದೇಶಕ ದೊಡ್ಡಬೀಕನಹಳ್ಳಿ ನಾಗರಾಜು ಸ್ವಾಗತಿಸಿದರು.
536 ಲೋಕಸಭೆಯಲ್ಲಿ ಪ್ರಶ್ನೆ:
ಪ್ರಜ್ವಲ್ ರೇವಣ್ಣ ಅವರು ಸಂಸತ್ತಿನಲ್ಲಿ ಹಾಸನ ಜಿಲ್ಲೆಗೆ ಸಂಬಂಧಿಸಿದ ವಿಷಯಗಳಷ್ಟೇ ಅಲ್ಲ. ರಾಜ್ಯದ ಹಿತದ ಬಗ್ಗೆಯೂ ಹೋರಾಟ ನಡೆಸುತ್ತಾ ಬಂದಿದ್ದಾರೆ. ಲೋಕಸಭೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ 536 ಪ್ರಶ್ನೆಗಳನ್ನು ಕೇಳಿ ಕೇಂದ್ರ ಸರ್ಕಾರದಿಂದ ಉತ್ತರ ಪಡೆದುಕೊಂಡಿದ್ದಾರೆ ಎಂದೂ ಹೇಳಿ ಪ್ರಜ್ವಲ್ ರೇವಣ್ಣ ಅವರ ಕೊಡುಗೆ ಏನು ಎಂದು ಪ್ರಶ್ನಿಸುತ್ತಿರುವ ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡಿದರು.