Advertisement
ಬಿಜೆಪಿ ರಾಜ್ಯ ಸಮಿತಿ ಸದಸ್ಯ ಮಾರಗೋಡನಹಳ್ಳಿ ಮಾಯಣ್ಣ, ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಮಳಲಿ ನಾರಾಯಣ್ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಮತ್ತಿತರರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತಾಲೂಕಿನ ಹುಲಿವಾಲ ಗ್ರಾಮದ ತೋಟದ ಮನೆಯೊಂದರಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಆಗುತ್ತಿರುವುದಾಗಿ ತಿಳಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ಮಾಯಣ್ಣ ಮಾತನಾಡಿ, ಜೆಡಿಎಸ್ ಮುಖಂಡರು ಕಾರ್ಯಕರ್ತರನ್ನು ತಮ್ಮ ಏಳಿಗೆಗಾಗಿ ದುಡಿಸಿಕೊಂಡ ನಂತರ ದೂರ ಸರಿಸಿ ತಾರತಮ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸುವ ಕಾರ್ಯಕರ್ತನಿಗೆ ಧಮಕಿ ಹಾಕಿ ಬಾಯಿ ಮುಚ್ಚಿಸುವಲ್ಲಿ ಮುಂದಾಗಿದ್ದು ಬಹುತೇಕ ಕಾರ್ಯಕರ್ತರ ಅನುಭವ ಇದೇ ಆಗಿದೆ. ಇತ್ತೀಚಿಗೆ ಹಲವರು ಬಿಜೆಪಿಗೆ ಸೇರ್ಪಡೆ ಆಗುತ್ತಿರುವುದು ಶ್ಲಾಘನೀಯವೆಂದರು. ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಮಳಲಿ ನಾರಾಯಣ್, ಪ್ರಧಾನ ಕಾರ್ಯದರ್ಶಿ ಪ್ರಸನ್ನ, ತಾಲೂಕು ಮಟ್ಟದ ಬಿಜೆಪಿ ಮುಖಂಡರಿದ್ದರು.