Advertisement

ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಬಲ ಪ್ರದರ್ಶನ: ಎಚ್.ಡಿ.ತಮ್ಮಯ್ಯ ಬೃಹತ್ ರೋಡ್ ಶೋ

01:29 PM Apr 20, 2023 | Team Udayavani |

ಚಿಕ್ಕಮಗಳೂರು: ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಬಲ ಪ್ರದರ್ಶನ ನಡೆಸಿದೆ. ಬೃಹತ್ ರೋಡ್ ಶೋ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಎಚ್ ಡಿ ತಮ್ಮಯ್ಯ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Advertisement

ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದು, ಸಿಟಿ ರವಿ ಕ್ಷೇತ್ರ ಬಿಜೆಪಿ ಭದ್ರಕೋಟೆಯಲ್ಲಿ ತಮ್ಮಯ್ಯ ನಾಮಪತ್ರ ಸಲ್ಲಿಕೆ ಹಿನ್ನೆಲೆ ಕಾಫಿನಾಡಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ. ರೋಡ್ ಶೋ ನಲ್ಲಿ 4 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು.

ಬಿಜೆಪಿಯಲ್ಲಿದ್ದ ತಮ್ಮಯ್ಯ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ವಿರೋಧ ನಡುವೆ ಎಚ್.ಡಿ.ತಮ್ಮಯ್ಯ ಗೆ ಕಾಂಗ್ರೆಸ್  ಹೈ ಕಮಾಂಡ್ ಮಣೆ ಹಾಕಿತ್ತು.

Advertisement

Udayavani is now on Telegram. Click here to join our channel and stay updated with the latest news.

Next