Advertisement

ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಪ್ರಧಾನಿಗೆ ಎಚ್‌ಡಿಡಿ ಪತ್ರ

12:41 PM Nov 03, 2019 | Team Udayavani |

ಬೆಂಗಳೂರು: ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಶ್‌ ಗೋಯಲ್‌ ಅವರಿಗೆ ಪತ್ರ ಬರೆದಿದ್ದಾರೆ.

Advertisement

ಆರ್‌ಸಿಇಪಿ ಒಪ್ಪಂದಿಂದ ದೇಶದ ರೈತಾಪಿ ಸಮುದಾಯದ ಸಂಕಷ್ಟಕ್ಕೆ ಸಿಲುಕಲಿದ್ದು ಇದರಿಂದ ದೊಡ್ಡ ಮಟ್ಟದ ಸಮಸ್ಯೆಗಳು ಉಂಟಾಗಲಿವೆ. ಯಾವುದೇ ಕಾರಣಕ್ಕೂ ಈ ಒಪ್ಪಂದಕ್ಕೆ ಸಹಿ ಹಾಕಬಾರದು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಪ್ರಸ್ತುತ ಕರ್ನಾಟಕ ಸೇರಿದಂತೆ ದೇಶದಲ್ಲಿ ಹೈನುಗಾರಿಕೆ ಮೇಲೆ ಅವಲಂಬಿತವಾಗಿರುವ ರೈತರ ಕುಟುಂಬಗಳು ಹಾಗೂ ಆರ್‌ಸಿಇಪಿ ಒಪ್ಪಂದದಿಂದ ಗ್ರಾಮೀಣ ಭಾಗದ ಆರ್ಥಿಕತೆಯ ಮೇಲೆ ಉಂಟಾಗಲಿರುವ ಪರಿಣಾಮಗಳ ಕುರಿತು ಪತ್ರದಲ್ಲಿ ವಿವರಿಸಿದ್ದಾರೆ.

ನೀತಿ ಆಯೋಗದ ಅಂದಾಜಿನ ಪ್ರಕಾರವೇ 2033 ರ ವೇಳಗೆ ದೇಶದ ಒಟ್ಟಾರೆ ಹಾಲಿನ ಉತ್ಪಾದನೆ ಪ್ರಸ್ತುತ ಇರುವ 180 ದಶಲಕ್ಷ ಟನ್‌ನಿಂದ 330 ದಶಲಕ್ಷ ಟನ್‌ಗೆ ಏರಿಕೆಯಾಗಲಿದೆ. ಬೇಡಿಕೆ 292 ದಶಲಕ್ಷ ಟನ್‌ಗಳಷ್ಟಿರಲಿದೆ.ಕರ್ನಾಟಕದಲ್ಲಿ 14 ಸಾವಿರ ಹಾಲು ಉತ್ಪಾದಕರ ಸಂಘಗಗಳಿದ್ದು 24 ಲಕ್ಷ ಹಾಲು ಉತ್ಪಾದಕರಿದ್ದಾರೆ. ನಿತ್ಯ 84 ಲಕ್ಷ ಕೆಜಿ ಹಾಲು ಉತ್ಪಾದನೆಯಾಗುತ್ತಿದೆ. 65 ಹಾಲಿನ ಉಪ ಉತ್ಪನ್ನಗಳನ್ನು ಮಾಡಲಾಗುತ್ತಿದೆ. ನಂದಿನಿ ಬ್ರ್ಯಾಂಡ್‌ನ‌ಡಿ ಕೋಟ್ಯಂತರ ಗ್ರಾಹಕರ ಮನೆ ಸೇರುತ್ತಿದೆ. ಗುಜರಾತ್‌ನಲ್ಲಿಯೂ ಹಾಲು ಉತ್ಪಾದನೆ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ರೈತರ ಕುಟುಂಬಗಳು ಜೀವನೋಪಾಯಕ್ಕೆ ಇದನ್ನೇ ಅವಲಂಬಿಸಿವೆ.

ಹೀಗಾಗಿ, ಇದೆಲ್ಲವನ್ನೂ ದೃಷ್ಟಿಯಲ್ಲಿಟ್ಟಕೊಂಡು ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next