Advertisement

ಕೇಂದ್ರ ಸರ್ಕಾರದ ವಿರುದ್ಧ ಎಚ್‌ಡಿಡಿ ಕಿಡಿ

11:18 PM Oct 08, 2019 | Team Udayavani |

ಚಿಂತಾಮಣಿ: “ಭೀಕರ ಪ್ರವಾಹದಿಂದ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ತವಾಗಿ ಸುಮಾರು 38,000 ಕೋಟಿ ರೂ. ನಷ್ಟ ಉಂಟಾಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ನಯಾಪೈಸೆ ಬಿಡುಗಡೆ ಮಾಡಿಲ್ಲ’ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಶ್ರೀಕ್ಷೇತ್ರದ ಕೈವಾರದಲ್ಲಿ ಜೆಡಿಎಸ್‌ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅವರ 25ನೇ ವರ್ಷದ ವಾರ್ಷಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

Advertisement

ಕೇಂದ್ರ ಸರ್ಕಾರ ಈಗ ನೀಡಿರುವ 1,200 ಕೋಟಿ ರೂ.ಪರಿಹಾರ ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಕೊಡಗು, ಶಿವಮೊಗ್ಗ ಮತ್ತಿತರ ಕಡೆ ಉಂಟಾಗಿದ್ದ ನೆರೆ ಪರಿಹಾರದ ನಷ್ಟದ ಪರಿಹಾರವೇ ಹೊರತು ಈಗಿನ 38,000 ಕೋಟಿ ರೂ.ಗೆ ಅಲ್ಲ ಎಂದು ಹೇಳಿದರು. ಕೇಂದ್ರದಿಂದ ಸಮರ್ಪಕ ಅನುದಾನಕ್ಕಾಗಿ ಇದೇ ತಿಂಗಳ 10ರಂದು ಫ್ರೀಡಂ ಪಾರ್ಕ್‌ನಲ್ಲಿ ಸಾಂವಿಧಾನಿಕವಾಗಿ ಹೋರಾಟ ಮಾಡುವುದಾಗಿ ದೇವೇಗೌಡರು ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next