Advertisement

ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲಾದ ಎಚ್‌ಡಿಕೆ 

10:17 AM Aug 11, 2017 | Team Udayavani |

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 

Advertisement

ತೀವ್ರ ಕೆಮ್ಮು ಮತ್ತು ಕಫ‌ದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಧರ್ಮಸ್ಥಳದ ಉಜಿರೆಯಲ್ಲಿ  ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫ‌ಲಕಾಣದ ಹಿನ್ನಲೆಯಲ್ಲಿ ಗುರುವಾರ ಸಿಂಗಾಪುರಕ್ಕೆ ತೆರಳಿರುವುದಾಗಿ ವರದಿಯಾಗಿದೆ. 

ಉತ್ತರ ಕರ್ನಾಟಕ ಪ್ರವಾಸದ ವೇಳೆ ಅಭಿಮಾನಿಗಳು ಸಿಡಿಸಿದ ಪಟಾಕಿ ಹೊಗೆ ಸೇವನೆಯಿಂದ ಕೆಮ್ಮು ಮತ್ತು ಕಫ‌ ಸಮಸ್ಯೆ ಕಾಣಿಸಿಕೊಂಡಿದ್ದು ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. 

ಹತ್ತಿರದ ಸಂಬಂಧಿ,ಮೈಸೂರು ವಿವಿ ಮಾಜಿ ಕುಲಪತಿ ರಂಗಪ್ಪ ಅವರು ಕುಮಾರ ಸ್ವಾಮಿ ಅವರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದು, ಭಾನುವಾರ ವಾಪಸಾಗಲಿದ್ದಾರೆ ಎಂದು ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next