Advertisement
“ಜೆಡಿಎಸ್ ಸ್ಪರ್ಧಿಸದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಬಹಿರಂಗವಾಗಿಯೇ ಮನವಿ ಮಾಡಿದ್ದಾರೆ. ಆದರೆ, ಕಾಂಗ್ರೆಸ್‌ನವರು ನಮಗೆ ಜೆಡಿಎಸ್ ಮತ ಬೇಕಾಗಿಲ್ಲ. ಅವರ ಜತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ. ಬೇಡ ಎಂದವರ ಮನೆ ಬಾಗಿಲಿಗೆ ಹೋಗಲಿಕ್ಕೆ ಆಗುತ್ತದೆಯೇ? ಹೀಗಾಗಿ ಯಡಿಯೂರಪ್ಪ ಅವರ ಮನವಿ ಬಗ್ಗೆ ಏನು ತೀರ್ಮಾನ ಕೈಗೊಳ್ಳಬೇಕೋ ಎಂಬುದನ್ನು ಶೀಘ್ರವೇ ನಿರ್ಧರಿಸುತ್ತೇವೆ’ ಎಂದರು.
Related Articles
Advertisement
ಇದನ್ನೂ ಓದಿ:ನವೆಂಬರ್ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.
ಮೈತ್ರಿ ನಿರ್ಧಾರ ಎಚ್‌ಡಿಕೆ-ಬಿಎಸ್‌ವೈಗೆ: ಸಿಎಂಹುಬ್ಬಳ್ಳಿ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡಿ ಹಲವು ವಿಚಾರ ಚರ್ಚೆ ಮಾಡಿದ್ದಾರೆ. ಜೆಡಿಎಸ್ ಜತೆ ಮೈತ್ರಿ ವಿಚಾರವಾಗಿ ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಎಸ್‌ವೈ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಹೊಸ ತಾಲೂಕುಗಳಿಗೆ ಮೂಲಸೌಕರ್ಯ ಒದಗಿಸಲು ತಡವಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯ ಸವಲತ್ತು, ಸೌಲಭ್ಯ, ಕಚೇರಿ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ವಿಷಯ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ತನಿಖೆ ಮೂಲಕ ಸತ್ಯ ಹೊರಬರಲಿ. ಹತ್ಯೆ ಸಂಚು ನಿಜವಾಗಿದ್ದರೆ ಕಠಿನ ಕ್ರಮ ಕೈಗೊಳ್ಳಲಿ.
– ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತ ಕಂಡು ಭ್ರಮನಿರಸನಗೊಂಡ ಜನ ಬದಲಾವಣೆ ಬಯಸುತ್ತಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ನಿಚ್ಚಳವಾಗಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾ ಧಿಸಲಿದೆ. ಆರು ವರ್ಷಗಳ ಹಿಂದೆ ನಡೆದ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 14 ಸ್ಥಾನಗಳಲ್ಲಿ ಗೆದ್ದಿತ್ತು. ಈಗ ಅ ಧಿಕಾರ ಇಲ್ಲದಿದ್ದರೂ ಅಷ್ಟೇ ಸ್ಥಾನಗಳಲ್ಲಿ ಗೆಲ್ಲುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ.
– ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಇದೇ ಈಶ್ವರಪ್ಪ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಬೆಲ್ಲದ್, ವಿಶ್ವನಾಥ ಸಹಿತ ಅವರ ಪಕ್ಷದ ಮುಖಂಡರೇ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡಿದ್ದರು. ಶೇ.40ರಷ್ಟು ಕಮಿಷನ್ ನೀಡಬೇಕೆಂದು ಗುತ್ತಿಗೆದಾರರ ಸಂಘ ಸರಕಾರದ ಮೇಲೆ ಆರೋಪ ಮಾಡಿದೆ. ಈಗ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಅವರ ಪಕ್ಷದವರೇ ಚರ್ಚಿಸುತ್ತಿದ್ದಾರೆ. ಇಂಥವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ?
-ಧ್ರುವ ನಾರಾಯಣ್, ಕೆಪಿಸಿಸಿ ಕಾರ್ಯಾಧ್ಯಕ್ಷ