Advertisement

Congress Party ನನ್ನ ಬಲ ಕುಗ್ಗಿಸಲು ಮಂಡ್ಯದಲ್ಲಿ ಎಚ್‌ಡಿಕೆ ಸ್ಪರ್ಧೆ: ಚಲುವರಾಯಸ್ವಾಮಿ

11:25 PM Apr 08, 2024 | Team Udayavani |

ಕೆ.ಆರ್‌.ಪೇಟೆ: ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಉತ್ತಮ ಕೆಲಸ ಜತೆಗೆ ಕಾಂಗ್ರೆಸ್‌ ಪಕ್ಷವನ್ನು ಸದೃಢವಾಗಿ ಮುನ್ನಡೆಸುತ್ತಿರುವ ನನ್ನ ಬಲ ಕುಗ್ಗಿಸಬೇಕೆಂಬ ಏಕೈಕ ಉದ್ದೇಶದಿಂದ ಎಚ್‌.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿದ್ದಾರೆಯೇ ಹೊರತು ಜಿಲ್ಲೆಯ ಹಿತಾಸಕ್ತಿಯಿಂದಲ್ಲ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಆರೋಪಿಸಿದರು.

Advertisement

ತಾಲೂಕಿನ ಹಡವನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಚಲುವರಾಯಸ್ವಾಮಿ ಪ್ರಭಾವ ಜಾಸ್ತಿಯಾಗುತ್ತಿದ್ದು, ಹೇಗಾದರೂ ಮಾಡಿ ತಗ್ಗಿಸಲೇಬೇಕೆಂದು ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಸಂಚು ರೂಪಿಸಿದರೂ ಸಹ ಅವರ ಷಡ್ಯಂತ್ರ ಫ‌ಲಿಸಲಿಲ್ಲ ಎಂದರು.

ಗೆದ್ದರೆ ಕೇಂದ್ರದಲ್ಲಿ ಕೃಷಿ ಮಂತ್ರಿಯಾಗುತ್ತೇನೆ, ಕಾವೇರಿ ಸಮಸ್ಯೆ ಬಗೆಹರಿಸುತ್ತೇನೆಂದು ಹೇಳುತ್ತಿರುವ ಕುಮಾರಸ್ವಾಮಿ, ಅವರ ತಂದೆ ದೇವೇಗೌಡರು ಪ್ರಧಾನಿ, ಇವರು ಸಂಸದರಾಗಿದ್ದಾಗ ಕಾವೇರಿ ಸಮಸ್ಯೆ ಬಗೆಹರಿಸಲಾಗದ ಸಮಸ್ಯೆಯನ್ನು ಈಗ ಬಗೆಹರಿಸಲು ಸಾಧ್ಯವೇ ಎಂದು ಸಚಿವರು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next