Advertisement

ಬಡಯುವಕರ ನೆತ್ತರಿನ ಮೇಲೆ ಸುಖದಸೌಧ ಕಟ್ಟುತ್ತಿರುವ ಬಿಜೆಪಿಗೆ ಪಾಪಪ್ರಜ್ಞೆ ಇಲ್ಲ:ಕುಮಾರಸ್ವಾಮಿ

01:33 PM Jul 30, 2022 | Team Udayavani |

ಬೆಂಗಳೂರು: ಕಾರ್ಯಕರ್ತರನ್ನು ‘ಮತೀಯ ವ್ಯಸನಿ’ಗಳನ್ನಾಗಿ ಮಾಡಿ ಬೇಳೆ ಬೇಯಿಸಿಕೊಳ್ಳುವ ಬಿಜೆಪಿಯ ಅಸಲಿ ಮುಖವನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಳಚಿಟ್ಟಿದ್ದಾರೆ. ಇದು ಅತ್ಯಂತ ಹೇಯ ಮತ್ತು ಪಾತಕ, ರಾಕ್ಷಸೀ ರಾಜಕಾರಣದ ಪರಾಕಾಷ್ಠೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

Advertisement

ಸರಣಿ ಟ್ವೀಟ್ ಮಾಡಿರುವ ಅವರು, ಕಂಡವರ ಮಕ್ಕಳ ಕಗ್ಗೊಲೆ, ಬಡ ಯುವಕರ ನೆತ್ತರಿನ ಮೇಲೆ ಸುಖದಸೌಧ ಕಟ್ಟುತ್ತಿರುವ ಬಿಜೆಪಿಗೆ ಪಾಪಪ್ರಜ್ಞೆ ಇಲ್ಲ. ಸಹಪಾಠಿಯ ಕೊಲೆಗೆ ಪ್ರತಿಯಾಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರೆ, ಅವರ ಆತ್ಮಸ್ಥೈರ್ಯವನ್ನೇ ಅಣಕಿಸುವ, ಅವರ ನೈತಿಕತೆಯನ್ನೇ ಶಂಕಿಸುವ ಈಶ್ವರಪ್ಪನವರು ಬಿಜೆಪಿಯ ನೈಜ ಮುಖವಾಡ ಎಂದು ಆರೋಪಿಸಿದ್ದಾರೆ.

ಬಾವುಟ ಕಟ್ಟಲು, ಕರಪತ್ರ ಹಂಚಲು, ಮತ ಕೇಳಲು, ಟೆಂಟ್‌ ಹಾಕಲು, ಗೆದ್ದವರನ್ನು ಭುಜದ ಮೇಲೆ ಹೊತ್ತು ಮೆರವಣಿಗೆ ಮಾಡಲು ಇದೇ ಯುವಕರು ಬೇಕು. ಇಂಥ ಯುವಕರಿಗೆ ನಾಯಕರಾದವರೇ ಧರ್ಮದ ಅಫೀಮಿನ ಅಮಲೇರಿಸಿ, ಅವರ ಜೀವಕ್ಕೆ ಸಂಚಕಾರ ತಂದು, ಅವರ ಕುಟುಂಬಗಳನ್ನು ಬೀದಿಪಾಲು ಮಾಡುವ ಕಿರಾತಕ, ಕೊಲೆಗೆಡುಕ ರಾಜಕಾರಣಕ್ಕೆ ಈಶ್ವರಪ್ಪನವರೇ ಪರಾಕಾಷ್ಠೆ‌ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿಗೂ ಕಾಲಿಟ್ಟ ಮಂಕಿಪಾಕ್ಸ್: ಇಥಿಯೋಪಿಯದಿಂದ ಬಂದ ವ್ಯಕ್ತಿಗೆ ಸೋಂಕು

“ರಾಜೀನಾಮೆ ಒಪ್ಪಿದರೆ ನಿಮ್ಮ ಗತಿ ಏನು? ನಿಮ್ಮ ಜಾಗಕ್ಕೆ ಹೊಸಬರು ಬರುತ್ತಾರೆ! ಬಿಜೆಪಿಗೆ ಕಾರ್ಯಕರ್ತರು ಸಿಗುವುದಿಲ್ಲವೇ? ಯುವಮೋರ್ಚಾ ಕಾರ್ಯಕರ್ತರು ಈಗಷ್ಟೇ ಕಣ್ಣು ಬಿಡುತ್ತಿದ್ದಾರೆ. ಪಕ್ಷಕ್ಕೆ ಅವರ ಕೊಡುಗೆ ಏನು?” ಎಂದು ಪ್ರಶ್ನಿಸಿರುವ ಈಶ್ವರಪ್ಪ, ಸಭ್ಯ ರಾಜಕಾರಣದ ಎಲ್ಲೆ ಮೀರಿ ಅಹಂಕಾರ ಪ್ರದರ್ಶಿಸಿದ್ದಾರೆ. ಕಗ್ಗೊಲೆಯಾದ ಬಡ ಯುವಕರ ಆತ್ಮಘೋಷದ ಶಾಪ ಬಿಜೆಪಿಗೆ ತಟ್ಟದೆ ಇರದು. ಕರ್ನಾಟಕವನ್ನು ʼಕಗ್ಗೊಲೆಗಳ ಕರ್ನಾಟಕʼವನ್ನಾಗಿ ಮಾಡಿದ ಕುಖ್ಯಾತಿ ಈ ಪಕ್ಷದ್ದೇ. ಕಮಲದ ರೆಕ್ಕೆಗಳಿಗೆ ಅಂಟಿಕೊಂಡಿರುವ ರಕ್ತದ ಕಲೆಗಳು, ನಿಮ್ಮ ಪಾಪದ ಕೊಡವನ್ನು ತುಂಬಿಸುತ್ತಿವೆ ಎಂದು ಆರೋಪಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next