Advertisement

HDK ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ: ಸಚಿವ ಜಮೀರ್ ಆಕ್ರೋಶ

03:43 PM Sep 24, 2023 | Team Udayavani |

ಬೆಂಗಳೂರು: ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಎಚ್. ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದಾರೆ? ತಮ್ಮ ಹೇಳಿಕೆಯ ಮೂಲಕ ನಾಡಿನ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಎಕ್ಸ್ ನಲ್ಲಿ ಸರಣಿ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

Advertisement

‘ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ತಾವು ಗೆಲ್ಲುತ್ತಿದ್ದರೆ ಎಂಬುದನ್ನು ಕುಮಾರಸ್ವಾಮಿ ಎದೆ ಮುಟ್ಟಿಕೊಂಡು ಹೇಳಲಿ.ಎಚ್. ಡಿ. ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿಕ್ಕನಾಯಕನಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ.’ಎಂದು ಸವಾಲು ಹಾಕಿದ್ದಾರೆ.

‘ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ, ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು ಇಲ್ಲದಿದ್ದರೆ ಸೋಲುತ್ತಿದ್ದರು.ಮುಸ್ಲಿಂ ಸಮುದಾಯ ಜೆಡಿಎಸ್ ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ 6 ಸ್ಥಾನ ಬರುತ್ತಿತ್ತು’ ಎಂದು ಜರಿದಿದ್ದಾರೆ.

‘ನಾನು ಅಪಾರವಾಗಿ ಗೌರವಿಸುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಆದರೆ ಕುಮಾರಸ್ವಾಮಿ ತಮ್ಮ ಸ್ವಾರ್ಥ ರಾಜಕಾರಣಕ್ಕೆ ಗೌಡರು ನಂಬಿ, ಪಾಲಿಸಿಕೊಂಡು ಬಂದ ತತ್ವ ಸಿದ್ಧಾಂತವನ್ನು ಬಲಿ ಕೊಟ್ಟಿದ್ದಾರೆ’ ಎಂದು ಬಿಜೆಪಿಯೊಂದಿಗಿನ ಮೈತ್ರಿ ಕುರಿತು ಆಕ್ರೋಶ ಹೊರ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next