Advertisement

Politics: ಇಂದು ವಿಜಯೇಂದ್ರ ಜತೆ HDK ಭೇಟಿ- ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ

09:40 PM Jan 20, 2024 | Team Udayavani |

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಆಯ್ಕೆಯೂ ಸೇರಿ ಪ್ರಮುಖ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಭಾನುವಾರ ಸಭೆ ನಡೆಸಲಿದ್ದಾರೆ.

Advertisement

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನಿವಾಸ ಧವಳಗಿರಿಯಲ್ಲಿ ಈ ಸಭೆ ನಡೆಯಲಿದೆ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಜತೆಗೆ ಎರಡು ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಮುಖ್ಯವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಇತ್ಯರ್ಥಕ್ಕಾಗಿ ಇಲ್ಲಿ ಚರ್ಚೆ ನಡೆಯಲಿದೆ. ಈ ಕ್ಷೇತ್ರದಲ್ಲಿ ಜೆಡಿಎಸ್‌-ಬಿಜೆಪಿ ಜಂಟಿ ಅಭ್ಯರ್ಥಿಯಾಗಿ ನ್ಯಾಯವಾದಿ ಎ.ಪಿ.ರಂಗನಾಥ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

ಕಳೆದ ಬಾರಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಂಗನಾಥ್‌ ಅವರು ಪುಟ್ಟಣ್ಣ ಅವರಿಗೆ ತೀವ್ರ ಪೈಪೋಟಿ ಒಡ್ಡಿದ್ದರು. ಹೀಗಾಗಿ ಅವರನ್ನೇ ಜಂಟಿಯಾಗಿ ಕಣಕ್ಕೆ ಇಳಿಸಿದರೆ ಕಾಂಗ್ರೆಸ್‌ನ್ನು ಸುಲಭವಾಗಿ ಮಣಿಸಬಹುದೆಂಬುದು ಎರಡೂ ಪಕ್ಷದ ನಾಯಕರ ವಾದವಾಗಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಯಾಗಿ ಪ್ರೀತಮ್‌ ಗೌಡ ಅಥವಾ ಅಶ್ವತ್ಥನಾರಾಯಣ ಅವರನ್ನು ಕಣಕ್ಕೆ ಇಳಿಸಬೇಕೆಂಬ ಅಭಿಪ್ರಾಯವೂ ತೇಲಿ ಬಂದಿದ್ದು, ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ.

 

Advertisement

Udayavani is now on Telegram. Click here to join our channel and stay updated with the latest news.

Next