Advertisement

ಜನತಾ ಜಲಧಾರೆ ಯಶಸ್ಸಿಗಾಗಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ

12:03 PM May 13, 2022 | Team Udayavani |

ಮೈಸೂರು: ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿರುವ ಜೆಡಿಎಸ್‍ ನ ಮಹತ್ವಾಕಾಂಕ್ಷೆಯ ಜನತಾ ಜಲಧಾರೆ ಸಮಾವೇಶ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Advertisement

ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ನ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ಡಿಕೆ, ಬೆಂಗಳೂರಿನ ಹೊರವಲಯದ ನೆಲಮಂಗಲದಲ್ಲಿ ಇಂದು ನಡೆಯುವ ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿಯಾಗಲೆಂದು ತಾಯಿ ಚಾಮುಂಡೇಶ್ವರಿಯನ್ನು ಬೇಡಿದ್ದೇನೆ. ತಾಯಿ ಅನುಗ್ರಹದಿಂದ ಸಮಾವೇಶ ಯಶಸ್ವಿಯಾಗುತ್ತದೆ ಎಂದರು.

ನಮ್ಮ ಜೆಡಿಎಸ್ ಪಕ್ಷದ ಜನತಾ ಜಲಧಾರೆ ವಾಹನದ ಮೂಲಕ ನಾಡಿನ ನೀರಾವರಿ ಯೋಜನೆ ಹಾಗೂ ಜೆಡಿಎಸ್ ಪಕ್ಷದ ನೀರಾವರಿ ಯೋಜನೆಗಳ ಕನಸ್ಸನ್ನು ರಾಜ್ಯಾದ್ಯಂತ ಜನತೆಗೆ ತಿಳಿಸಲಾಗಿದೆ ಎಂದು ಹೇಳಿದರು.

ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈ ತನಕ ರಾಜ್ಯದಲ್ಲಿ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ ಎಂದರು.

Advertisement

ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಬೇಕಷ್ಟೇ. ಈ ಬಗ್ಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಈಗಾಗಲೇ ನಮ್ಮ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕೆಲಸ ಆರಂಭಿಸಿದ್ದಾರೆ ಎಂದು ತಿಳಿಸಿದರು.

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೆಚ್ ಡಿಕೆ ಹೇಳಿದರು.

ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಮುಂತಾದವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next