Advertisement

ಕಾಂಗ್ರೆಸ್ ತನ್ನ ಅಹಂಕಾರ ಮುಂದುವರೆಸಿದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳಬಹುದು :HDK

11:58 AM Oct 05, 2020 | sudhir |

ಬೆಂಗಳೂರು : ಮಿತ್ರಪಕ್ಷಗಳನ್ನೇ ಆಪೋಷನ ಪಡೆದು ಜೀವಿಸುತ್ತಿರುವ, ಜನರಿಂದ ತಿರಸ್ಕಾರವಾಗಿರುವ ಜೊತೆಗೆ ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿರುವ ಕಾಂಗ್ರೆಸ್‌ ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ? ಕಾಂಗ್ರೆಸ್‌ ತನ್ನ ಅಹಂಕಾರದ ಪ್ರವೃತ್ತಿ ಮುಂದುವರಿಸಿಕೊಂಡು ಹೋದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳುವುದರಲ್ಲಿ ಅನುಮಾನಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ತಮ್ಮ ಟ್ವಿಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

Advertisement

ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ ಜೆಡಿಎಸ್ ನಿಂದ ಪ್ರವರ್ದಮಾನಕ್ಕೆ ಬಂದಿದ್ದ, ಜೆಡಿಎಸ್ ನಿಂದಲೇ ಡಿಸಿಎಂ ಆದ ನಾಯಕರೊಬ್ಬರು, ಸಭೆಯೊಂದರಲ್ಲಿ ಜೆಡಿಎಸ್ ಮುಖಂಡರನ್ನು ತಮ್ಮ ಈಗಿನ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾ ಅದೇ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್ ರಾಜಕೀಯ ಪಕ್ಷವಲ್ಲ ಎಂದು ಹೇಳಿದ್ದಾರೆ. ಉಪಚುನಾವಣೆಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್ ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ? ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಇದನ್ನೂ ಓದಿ:ಡಿಕೆ ಶಿವಕುಮಾರ್ ದೊಡ್ಡಾಲಹಳ್ಳಿಯ ಮನೆ ಲಾಕರ್ ಒಡೆದಾಗ ಸಿಕ್ಕಿದ್ದು ಚಿಲ್ಲರೆ ಮಾತ್ರ!

ಭಾರತದ ಅತಿ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್‌ ಇಂದು ಯಾವ ಪರಿಸ್ಥಿತಿಯಲ್ಲಿದೆ, ಯಾವ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದೆ? ಎಲ್ಲೆಲ್ಲಿ ಯಾರು ಯಾರ ಹೆಗಲ ಮೇಲೆ ಕುಳಿತು ರಾಜಕೀಯ ಮಾಡುತ್ತಿದೆ? ಎಲ್ಲಿಲ್ಲಿ ಯಾರು ಯಾರಿಗೆ ಹೆಗಲಾಗಿದೆ? ಜೆಡಿಎಸ್‌ ಉಪ್ಪು ತಿಂದ ಆ ಮಹಾನ್‌ ನಾಯಕರು ಈ ಪ್ರಶ್ನೆಗಳಿಗೆ ಉತ್ತರ ನೀಡುವರೇ? ಎಂದಿದ್ದಾರೆ.

2018ರ ಚುನಾವಣೆಯಲ್ಲಿ ‘ಮಹಾನ್‌ ನಾಯಕರ’ ‘ಅಪ್ಪನಾಣೆ’ ‘ತಿಪ್ಪರಲಾಗ’ದ ಸವಾಲುಗಳನ್ನು ಜನ ಸೋಲಿಸಿದ್ದಾರೆ. ಆ ಪಕ್ಷ ಅಧಿಕಾರಕ್ಕೆ ಬಾರದು, ಈ ಪಕ್ಷ ಅಧಿಕಾರಕ್ಕೆ ಬಾರದು ಎಂದು ‘ಅಪ್ಪನಾಣೆ’ಗಳನ್ನು ಇಟ್ಟವರಿಗೆ ಜನ, ಆಣೆ ಪ್ರಮಾಣದ ಮಹತ್ವ ತಿಳಿಸಿಕೊಟ್ಟಿದ್ದಾರೆ. ಈ ಉಪ ಚುನಾವವಣೆಯಲ್ಲೂ ಅವರಿಗೆ ತಕ್ಕ ಉತ್ತರ ಸಿಗಲಿದೆ. ಅದಕ್ಕಾಗಿ ಕಾಯಲಿ ಎಂದು ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ತಿರುಗೇಟನ್ನು ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next