Advertisement

HDK: ನಾಫೆಡ್‌ನ‌ಲ್ಲಿ 1.5 ಲಕ್ಷ ಮೆಟ್ರಿಕ್‌ ಟನ್‌ ಕೊಬ್ಬರಿ ಖರೀದಿಗೆ ಎಚ್‌ಡಿಕೆ ಮನವಿ

08:28 PM Dec 29, 2023 | Pranav MS |

ಬೆಂಗಳೂರು: ಕೇಂದ್ರ ಸರಕಾರ ಕೊಬ್ಬರಿಗೆ ಬೆಂಬಲ ಬೆಲೆ ನೀಡಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ನಾಫೆಡ್‌ ಮೂಲಕ 1.5 ಲಕ್ಷ ಮೆಟ್ರಿಕ್‌ ಟನ್‌ ಕೊಬ್ಬರಿ ಖರೀದಿಸಬೇಕು ಎಂದು ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

Advertisement

ಈ ಬಗ್ಗೆ ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಮಿಲ್ಲಿಂಗ್‌ ಕೊಬ್ಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ.ಗಳನ್ನು ಪ್ರತಿ ಕ್ವಿಂಟಾಲ್‌ಗೆ ಏರಿಸಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

ತೆಂಗು ಬೆಳೆಗಾರರು ಬಹಳ ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡು ಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್‌ ಮೂಲಕವೇ ಕನಿಷ್ಠ 1.5 ಲಕ್ಷ ಮೆಟ್ರಿಕ್‌ ಟನ್‌ ಕೊಬ್ಬರಿ ಖರೀದಿಸಬೇಕು ಎಂದು ಕುಮಾರಸ್ವಾಮಿ ವಿನಂತಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next