Advertisement

ಜೆಡಿಎಸ್ ಗೆ ಅಡ್ಡ ಮತದಾನದ ಗುನ್ನ: ಬಿಜೆಪಿ ಗೆಲ್ಲಿಸುವುದಕ್ಕೆ ಅಭಿನಂದನೆಗಳು ಎಂದ ಎಚ್ ಡಿಕೆ

10:12 AM Jun 10, 2022 | Team Udayavani |

ಬೆಂಗಳೂರು: ನಮ್ಮ ಪಕ್ಷದ ಶಾಸಕ ಶ್ರೀನಿವಾಸಗೌಡರು ಅಧಿಕೃತವಾಗಿ ಕಾಂಗ್ರೆಸ್ ಗೆ ಮತ ಹಾಕುತ್ತೇನೆ ಎಂದಿದ್ದಾರೆ. ಅವರು ಅಡ್ಡಮತದಾನ ಮಾಡುವಂತೆ ಮಾಡಿದ ಸಿದ್ದರಾಮಯ್ಯ ಹಾಗೂ ರಮೇಶ್ ಕುಮಾರ್ ಅವರಿಗೆ ಅಭಿನಂದನೆಗಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

Advertisement

ನಮ್ಮ ಪಕ್ಷದ 31 ಶಾಸಕರು ಒಟ್ಟಾಗಿ ಇದ್ದಾರೆ. ಕೋಲಾರ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಪರ ಮತ ಹಾಕುತ್ತೇನೆ ಎಂದಿದ್ದಾರೆ. ಈ ಮೂಲಕ ಬಿಜೆಪಿ ಗೆಲುವಿಗೆ ಸಹಕರಿಸಿದ ಕಾಂಗ್ರೆಸ್ ಗೆ ಅಭಿನಂದನೆ. ನಾಳೆಯಿಂದ ರಾಜ್ಯದಲ್ಲಿ ಹೊಸ ರಾಜಕಾರಣ ಆರಂಭವಾಗುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಒಳ ಒಪ್ಪಂದವಾಗಿದೆ. ಸಿದ್ದರಾಮಯ್ಯನಿಗೆ ಅಲ್ಪಸಂಖ್ಯಾತ ಶಬ್ದದ ಅರ್ಥ ಗೊತ್ತಿದೆಯೇ? ಸಿದ್ದರಾಮಯ್ಯನವರು ಬಿಜೆಪಿಯ ಬಿ ಟೀಂ ಎಂಬುದು ಈಗ ಜಗಜ್ಜಾಹಿರಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಮೂರು ಅಭ್ಯರ್ಥಿಗಳೂ ಗೆಲ್ಲುತ್ತಾರೆ: ಬಿಎಸ್ ವೈ ವಿಶ್ವಾಸ

ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ನಾವು ಸಂಬಂಧ ಬೆಳೆಸುವುದಿಲ್ಲ. ಆ ಪ್ರಶ್ನೆ ಕ್ಲೋಸ್ಡ್ ಡೋರ್‌. ಸ್ವಯಂ ಬಲದ ಮೇಲೆ ನಾವು ಗೆಲ್ಲುವ ಪ್ರಯತ್ನ ಮಾಡುತ್ತೇವೆ. ನಾಳೆಯಿಂದ ಕರ್ನಾಟಕದಲ್ಲಿ ಹೊಸ ಶಕೆ ಆರಂಭವಾಗಲಿದೆ ಎಂದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next