Advertisement

ಎಚ್‌ಡಿಕೆ ಹೇಳಿಕೆ ಖಂಡಿಸಿ ಪ್ರತಿಭಟನೆ

12:45 PM Nov 20, 2018 | |

ಮೈಸೂರು: ರೈತರು ಹಾಗೂ ರೈತ ಮಹಿಳೆ ಕುರಿತು ಲಘುವಾಗಿ ಮಾತನಾಡಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿ ಕನ್ನಡ ಕ್ರಾಂತಿ ದಳದ ಸದಸ್ಯರು ನಗರದ ಅಗ್ರಹಾರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Advertisement

ರಾಜ್ಯದ ಜವಾಬ್ದಾರಿಯುತ ಸ್ಥಾನದಲ್ಲಿರುವ ಎಚ್‌.ಡಿ.ಕುಮಾರಸ್ವಾಮಿ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಯಾವುದೇ ನೋವುಗಳಿಲ್ಲದಂತೆ ಮಾಡುವುದಾಗಿ ಹೇಳುವ ಕುಮಾರಸ್ವಾಮಿ ಅವರು ರೈತ ಮಹಿಳೆಯ ಬಗ್ಗೆ ಕೇವಲವಾಗಿ ಮಾತನಾಡಿರುವುದು ಸರಿಯಲ್ಲ.

ಹೀಗಾಗಿ ಕೂಡಲೇ ರೈತರ ಕ್ಷಮೆಯಾಚಿಸಬೇಕು. ಜತೆಗೆ ಅನ್ನದಾತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರ ಸತ್ಯಪ್ಪ, ಕನ್ನಡ ಕ್ರಾಂತಿದಳ ಯುವ ಘಟಕದ ಅಧ್ಯಕ್ಷ ತೇಜಸ್ವಿ ಕುಮಾರ್‌, ಶ್ರೀಧರ್‌, ಭಾನುಮೋಹನ್‌, ಮಾಲಿನಿ ಪಾಲಾಕ್ಷ ಪರಮೇಶ್‌ ಇನ್ನಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next